Belagavi NewsBelgaum NewsKannada NewsKarnataka NewsNationalPolitics

*ರಾಜ್ಯಪಾಲರನ್ನು ಅಪಮಾನ ಮಾಡುವ ಕೆಲಸ ಕಾಂಗ್ರೆಸ್ ಮಾಡುತ್ತಿದೆ: ಜಗದೀಶ್ ಶೆಟ್ಟರ್*

ಪ್ರಗತಿವಾಹಿನಿ ಸುದ್ದಿ: : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಕಾನೂನು ರೀತಿಯಲ್ಲಿ ಬಿಜೆಪಿ ಹೋರಾಟ ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ, ಸಂಸದ ಜಗದೀಶ್ ಶೆಟ್ಟರ್ ಹೇಳಿದರು.

ಸೋಮವಾರ ಬೆಳಗಾವಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಮುಡಾ ಹಗರಣದಲ್ಲಿ ರಾಜ್ಯಪಾಲರು ತನಿಖೆಗೆ ಆದೇಶ ಕೊಟ್ಟಿದ್ದಾರೆ. ತನಿಖೆ ಎದುರಿಸಿ ನಾನು ಸಾಚಾ ಎಂದು ಸಿದ್ದರಾಮಯ್ಯನವರು ಸಾಬೀತು ಮಾಡಬೇಕು. ರಾಜ್ಯಪಾಲರನ್ನು ಅಪಮಾನ ಮಾಡುವ ಕೆಲಸ ಕಾಂಗ್ರೆಸ್ ನವರು ಮಾಡುತ್ತಿದ್ದಾರೆ ಎಂದರು.

ಸಂವಿಧಾನನಿಕ ಹುದ್ದೆಗೆ ಕುಂದು ತರುವ ರೀತಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ವರ್ತನೆ ಇದೆ‌. ಕಾನೂನು ತಜ್ಞರ ಸಲಹೆ ಪಡೆದು ರಾಜ್ಯಪಾಲರು ನಿರ್ಧಾರ ಮಾಡಿದ್ದಾರೆ. ರಾಜ್ಯಪಾಲರ ನಿರ್ಣಯಗಳನ್ನು ಅನೇಕರು ಪ್ರಶ್ನೆ ಸಹ ಮಾಡಿದ್ದಾರೆ ಎಂದರು.

ಸುಪ್ರೀಂ ಕೋರ್ಟ್ ಹಿರಿಯ ವಕೀಲರು ಬೆಂಗಳೂರಿಗೆ ಬಂದಿದ್ದಾರೆ. ರಾಜ್ಯಪಾಲರ ವಿರುದ್ಧ ಕೆಟ್ಟದಾಗಿ ನಡೆದುಕೊಳ್ಳುವುದು ಸರಿಯಲ್ಲ. ದಲಿತ ಸಮಾಜದ ವ್ಯಕ್ತಿಯನ್ನು ಅಪಮಾನ ‌ಮಾಡುವ ಕೆಲಸ ಮಾಡಬಾರದು. ಸಂವಿಧಾನದ ಹುದ್ದೆಯಲ್ಲಿ ಇರೋ ವ್ಯಕ್ತಿಗೆ ಕಾಂಗ್ರೆಸ್ ಅಪಮಾನ ಮಾಡುತ್ತಿದೆ. ಶಾಂತಿಯಿಂದ ಕಾನೂನು ಹೋರಾಟ ಮಾಡಿ ಯಾರು ಬೇಡ ಎನ್ನಲ್ಲ. ಬೀದಿಗೆ ಇಳಿದು ಹೋರಾಟ ಮಾಡುವುದು ಸರಿಯಲ್ಲ. ತಕ್ಷಣ ರಾಜೀನಾಮೆ ಕೊಟ್ಟು ತನಿಖೆ ಎದುರಿಸಬೇಕಿತ್ತು. ಸಿಎಂ ಸಿದ್ದರಾಮಯ್ಯ ಈವರೆಗೆ ರಾಜೀನಾಮೆ ನೀಡುತ್ತಿಲ್ಲ. ಸಿಎಂ ಹುದ್ದೆಯಲ್ಲಿ ಇರಲು ಸಿದ್ದರಾಮಯ್ಯ ಅವರು ಅನರ್ಹ ಎಂದು ವಾಗ್ದಾಳಿ ನಡೆಸಿದರು.

ರಾಜ್ಯಪಾಲ ನಿರ್ಧಾರಗಳನ್ನು ಸುಪ್ರೀಂ, ಹೈಕೋರ್ಟ್ ನಲ್ಲಿ ಅಂಗೀಕಾರವಾಗಿದೆ. ನಿರಾಣಿ, ಜೊಲ್ಲೆ ಯಾವುದೇ ಅಧಿಕಾರದಲ್ಲಿ ಇಲ್ಲ. ಈಗ ಎಚ್ ಡಿ ಕುಮಾರಸ್ವಾಮಿ ಕೇಂದ್ರ ಸಚಿವರಾಗಿದ್ದಾರೆ. ವಿಧಾನಸಭೆಯಲ್ಲಿ ಯಾಕೆ ಅಂದಿನ ವಿರೋಧ ಪಕ್ಷದ ನಾಯಕರು ಯಾಕೆ ಮಾತನಾಡಲಿಲ್ಲ. ಮುಡಾ ಕೇಸಿನ ಎಲ್ಲಾ ಫೈಲ್ ನೋಡಿದ್ದೇನೆ. ಕೃಷಿ ಭೂಮಿ ಎಂದು ತೋರಿಸಿದ್ದಾರೆ. ಚುನಾವಣೆ ಅಫಡವೀಟ್ ನಲ್ಲಿ ಕಡಿಮೆ ಹಣ ತೋರಿಸಿ ಸಿದ್ದರಾಮಯ್ಯ ಮುಡಾ ಪ್ರಕರಣದಲ್ಲಿ ತಪ್ಪು ಮಾಡಿದ್ದಾರೆ ಎಂದರು.

ಐವತ್ತು ಐವತ್ತು ಅನುಪಾತದಲ್ಲಿ ಭೂಮಿ ಹಂಚಿಕೆ ವಿಚಾರಕ್ಕೆ ಉತ್ತರಿಸಿದ ಅವರು, ಖರೀದಿಸಿದ ಭೂಮಿಯಲ್ಲಿ ಹಂಚಿಕೆ ಮಾಡಬೇಕಿತ್ತು. ಕಾನೂನು ಉಲ್ಲಂಘನೆ ಮಾಡಿ ಬೇರೆ ಕಡೆ 14 ಸೈಟ್ ತೆಗೆದುಕೊಂಡಿದ್ದಾರೆ.ಸಿದ್ದರಾಮಯ್ಯನವರಿಗೆ ಮುಂದೆ ಜೈಲಿಗೆ ಹೋಗುವ ಪರಿಸ್ಥಿತಿ ಬರಲಿದೆ. ನನ್ನ ಕೂಡ ಒಬ್ಬ ವಕೀಲ ಅವರಿಗೆ ಶಿಕ್ಷೆ ಆಗಲಿದೆ ಎಂದರು.

ಮುಡಾ ಅಧಿಕಾರಗಳು ರಾಜ್ಯ ಸರ್ಕಾರ ಅನುಮತಿ ಇಲ್ಲದೇ ತಾವೇ ಹಂಚಿಕೆ ಮಾಡಿದ್ದಾರೆ. ಬಿಜೆಪಿ ಸರ್ಕಾರದ ಸಚಿವರು ಎನಾದರೂ ಅನುಮತಿ ಕೊಟ್ಟಿದ್ದರೇ ಅದು ಕಾನೂನು ಬಾಹೀರ ಎಂದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button