
ಪ್ರಗತಿವಾಹಿನಿ ಸುದ್ದಿ: ಕಾಂಗ್ರೆಸ್ ಮುಖಂಡ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ನಂಜೇಶ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಶ್ರೀನಿವಾಸ್ ಬಂಧಿತ ಆರೋಪಿ. ಆರೋಪಿ ಕಾಲಿಗೆ ಕಾಲಿಗೆ ಗುಂಡೆಟು ಹೊಡೆದು ಬಂಧಿಸಲಾಗಿದೆ.
ಕಾಂಗ್ರೆಸ್ ಮುಖಂಡ ನಂಜೇಶ್ ಅವರನ್ನು ಸಾತನೂರು ಆರ್.ಕೆ.ಡಾಬಾ ಬಳಿ ಶ್ರೀನಿವಾಸ್ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆಗೈದು ಪರಾರಿಯಾಗಿದ್ದ. ಬಳಿಕ ಗಬ್ಬಾಡಿ ಎಂಬಲ್ಲಿ ತಲೆಮರೆಸಿಕೊಂಡಿದ್ದ.
ಈ ಬಗ್ಗೆ ಖಚಿತ ಮಾಹಿತಿ ಪಡೆದ ಇನ್ಸ್ ಪೆಕ್ಟರ್ ಅನಂತರಾಜು ತಂಡ ಇಂದು ಬೆಳಿಗ್ಗೆ ಗಬ್ಬವಾಡಿ ಬಳಿ ತೆರಳಿ ಆರೋಪಿ ಶ್ರೀನಿವಾಸ್ ನನ್ನು ಬಂಧಿಸಲು ಮುಂದಾಗಿದೆ. ಈ ವೇಳೆ ಆರೋಪಿ ಶ್ರೀನಿವಾಸ್ ಕಾನ್ಸ್ಟೇಬಲ್ ರಮೇಶ್ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದಾನೆ. ಎಚ್ಚರಿಕೆ ನೀಡಿದರೂ ತಪ್ಪಿಸಿಕೊಳ್ಳಲು ಮುಂದಾದ ವೇಳೆ ಇನ್ಸ್ ಪೆಕ್ಟರ್ ಅನಂತರಾಜು ಆರೋಪಿ ಕಾಲಿಗೆ ಗುಂಡೇಟು ಹೊಡೆದು ಬಂಧಿಸಿದ್ದಾರೆ.