*ಮಾರಕಾಸ್ತ್ರಗಳಿಂದ ಹೊಡೆದು ಕಾಂಗ್ರೆಸ್ ಮುಖಂಡನ ಬರ್ಬರ ಹತ್ಯೆ*

ಪ್ರಗತಿವಾಹಿನಿ ಸುದ್ದಿ: ಕಾಂಗ್ರೆಸ್ ಮುಖಂಡ, ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರೊಬ್ಬರನ್ನು ಮಾರಕಾಸ್ತ್ರಗಳಿಂದ ಹೊಡೆದು ಬರ್ಬರವಾಗಿ ಹತ್ಯೆಗೈದಿರುವ ಘಟನೆ ನಡೆದಿದೆ. ರಾಮನಗರ ಜಿಲ್ಲೆಯ ಸಾತನೂರಿನಲ್ಲಿ ಈ ಘಟನೆ ನಡೆದಿದೆ. ಹೊಂಗಾಣಿದೊಡ್ಡಿ ಗ್ರಾಮದ ನಂಜೇಶ್ (45) ಕೊಲೆಯಾದ ಕಾಂಗ್ರೆಸ್ ಮುಖಂಡ. ಸಾತನೂರಿನ ಅಚ್ಚಲು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರಾಗಿದ್ದರು. ಕೆಲ ದಿನಗಳ ಹಿಂದೆ ಸೈಟ್ ವಿಚಾರವಾಗಿ ಗಲಾಟೆ ನಡೆದಿತ್ತು. ಇದೇ ಕಾರಣಕ್ಕೆ ಕೊಲೆ ನಡೆದಿದೆ ಎನ್ನಲಾಗಿದೆ. ನಂಜೇಶ್ ಮೇಲೆ ದುಷ್ಕರಮಿಗಳು ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದರು. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ … Continue reading *ಮಾರಕಾಸ್ತ್ರಗಳಿಂದ ಹೊಡೆದು ಕಾಂಗ್ರೆಸ್ ಮುಖಂಡನ ಬರ್ಬರ ಹತ್ಯೆ*