ಪ್ರಗತಿವಾಹಿನಿ ಸುದ್ದಿ; ಭೋಪಾಲ್: ಪ್ರಧಾನಿ ನರೇಂದ್ರ ಮೋದಿ ಹತ್ಯೆ ಬಗ್ಗೆ ಮಾತನಾಡಿದ್ದ ಕಾಂಗ್ರೆಸ್ ನಾಯಕ, ಮಾಜಿ ಸಚಿವ ರಾಜಾ ಪಟೇರಿಯಾ ಅವರನ್ನು ಮಧ್ಯಪ್ರದೇಶ ಪೊಲೀಸರು ಬಂಧಿಸಿದ್ದಾರೆ.
ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸುವ ಬರದಲ್ಲಿ ಅವರನ್ನು ಹತ್ಯೆ ಮಾಡುವಂತೆ ಹೇಳಿಕೆ ನೀಡಿದ್ದ ರಾಜಾ ಪಟೇರಿಯಾ ವಿರುದ್ಧ ಎಫ್ ಐಆರ್ ದಾಖಲಾಗಿತ್ತು. ಇದೀಗ ಪಟೇರಿಯಾ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಮಧ್ಯಪ್ರದೇಶದ ಮಂಡಲ್ ಸೆಕ್ಟರ್ ನಲ್ಲಿ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಪಟೇರಿಯಾ, ಪ್ರಧಾನಿ ಮೋದಿ ದೇಶದಲ್ಲಿ ಜಾತಿ, ಧರ್ಮ, ಭಾಷೆಗಳ ನಡುವೆ ವಿಷಬೀಜ ಬಿತ್ತುತ್ತಿದ್ದು, ಈ ಮೂಲಕ ವಿಭಜನೆ ಮಾಡಲು ಹೊರಟಿದ್ದಾರೆ. ಜನರಲ್ಲಿ ಭಯದ ವಾತಾವರಣ ನಿರ್ಮಿಸುತ್ತಿದ್ದಾರೆ. ದೇಶದಲ್ಲಿ ಬಡವರು, ಆದಿವಾಸಿಗಳು ನೆಮ್ಮದಿಯಿಂದ ಬದುಕುವ ವಾತಾವರಣವಿಲ್ಲದಂತಾಗಿದೆ. ಸಂವಿಧಾನ ರಕ್ಷಿಸಲು ಪ್ರಧಾನಿ ಮೋದಿ ಹತ್ಯೆ ಮಾಡಿ ಎಂದು ಹೇಳಿದ್ದರು. ಸಾಮಾಜಿಕ ಜಾಲತಾಣಗಳಲ್ಲಿ ಪಟೇರಿಯಾ ಹೇಳಿಕೆ ವೈರಲ್ ಆಗುತ್ತಿದ್ದಂತೆ ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿದ್ದರು. ಪ್ರಧಾನಿ ವಿರುದ್ಧ ಹತ್ಯೆಗೆ ಪ್ರಚೋದನೆ ನೀಡಿದ ಕಾಂಗ್ರೆಸ್ ನಾಯಕನ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದರು.
ಗೃಹ ಸಚಿವರ ಸೂಚನೆ ಮೇರೆಗೆ ಮಧ್ಯಪ್ರದೇಶದ ಪನ್ನಾ ಠಾಣೆಯಲ್ಲಿ ಪಟೇರಿಯಾ ವಿರುದ್ಧ ಎಫ್ ಐ ಆರ್ ದಾಖಲಾಗಿತ್ತು. ವಿವಾದ ಭುಗಿಲೇಳುತ್ತಿದ್ದಂತೆ ವಿಡಿಯೋ ಬಿಡುಗಡೆ ಮಾಡಿ ಸ್ಪಷ್ಟನೆ ನೀಡಿದ ಕಾಂಗ್ರೆಸ್ ನಾಯಕ ರಾಜಾ ಪಟೇರಿಯಾ, ನಾನು ಪ್ರಧಾನಿ ಮೋದಿ ಹತ್ಯೆ ಮಾಡುವಂತೆ ಹೇಳಿಲ್ಲ ಸೋಲಿಸುವಂತೆ ಹೇಳಿದ್ದೇನೆ. ಸಂವಿಧಾನ ಉಳಿಸಲು ಮೋದಿಯವರನ್ನು ಸೋಲಿಸಿ ಎಂದು ಹೇಳಿದ್ದೇನೆ. ಆದರೆ ಅನಗತ್ಯವಾಗಿ ನನ್ನ ಹೇಳಿಕೆಯನ್ನು ತಿರುಚಿ ಈ ರೀತಿ ಅಪಪ್ರಚಾರ ಮಾಡಲಾಗುತ್ತಿದೆ. ಕೊಲೆ ಮಾಡಿ ಎಂಬ ಮಾತನ್ನು ನಾನು ಹೇಳಿಯೇ ಇಲ್ಲ ಎಂದು ಉಲ್ಟಾ ಹೊಡೆದಿದ್ದರು. ಆದರೂ ಈಗ ರಾಜಾ ಪಟೇರಿಯಾ ಅವರನ್ನು ಬಂಧಿಸಲಾಗಿದೆ.
ಕರ್ನಾಟಕದ ಕರಾವಳಿ ತೀರಗಳ ವಿಸ್ಮಯ ನೋಟಗಳು
https://pragati.taskdun.com/amazing-views-of-karnatakas-coastline/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ