ಪ್ರಗತಿವಾಹಿನಿ ಸುದ್ದಿ; ನವದೆಹಲಿ: ವಾಕ್ಸಮರದ ಬರದಲ್ಲಿ ರಾಜಕೀಯ ನಾಯಕರು ನಾಲಿಗೆ ಹರಿ ಬಿಟ್ಟು ವಿವಾದಗಳನ್ನು ಸೃಷ್ಟಿಸುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸುವ ಬರದಲ್ಲಿ ಅವರನ್ನು ಹತ್ಯೆ ಮಾಡುವಂತೆ ಹೇಳಿಕೆ ನೀಡಿ ಕಾಂಗ್ರೆಸ್ ನಾಯಕರೊಬ್ಬರು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ.
ಮಧ್ಯಪ್ರದೇಶ ಕಾಂಗ್ರೆಸ್ ನಾಯಕ, ಮಾಜಿ ಸಚಿವ ರಾಜಾ ಪಟೇರಿಯಾ, ಪ್ರಧಾನಿ ನರೇಂದ್ರ ಮೋದಿ ಹತ್ಯೆ ಮಾಡಿ ಎಂದು ಹೇಳುವ ಮೂಲಕ ಎಲ್ಲರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಪ್ರಧಾನಿ ವಿರುದ್ಧ ಹತ್ಯೆಗೆ ಪ್ರಚೋದನೆ ನೀಡಿದ ವಿವಾದಾತ್ಮಕ ಹೇಳಿಕೆ ಹಿನ್ನೆಲೆಯಲ್ಲಿ ರಾಜಾ ಪಟೇರಿಯಾ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.
ಪ್ರಧಾನಿ ಮೋದಿ ದೇಶದಲ್ಲಿ ಜಾತಿ, ಧರ್ಮ, ಭಾಷೆಗಳ ನಡುವೆ ವಿಷಬೀಜ ಬಿತ್ತುತ್ತಿದ್ದು, ಈ ಮೂಲಕ ವಿಭಜನೆ ಮಾಡಲು ಹೊರಟಿದ್ದಾರೆ. ಜನರಲ್ಲಿ ಭಯದ ವಾತಾವರಣ ನಿರ್ಮಿಸುತ್ತಿದ್ದಾರೆ. ದೇಶದಲ್ಲಿ ಬಡವರು, ಆದಿವಾಸಿಗಳು ನೆಮ್ಮದಿಯಿಂದ ಬದುಕುವ ವಾತಾವರಣವಿಲ್ಲದಂತಾಗಿದೆ. ಸಂವಿಧಾನ ರಕ್ಷಿಸಲು ಪ್ರಧಾನಿ ಮೋದಿ ಹತ್ಯೆ ಮಾಡಿ ಎಂದು ರಾಜ ಪಟೇರಿಯಾ ನೀಡಿರುವ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಕಾಂಗ್ರೆಸ್ ನಾಯಕನ ಹೇಳಿಕೆ ವಿರುದ್ಧ ಬಿಜೆಪಿ ನಾಯಕರು ತೀವ್ರ ಖಂಡನೆ ವ್ಯಕ್ತಪಡಿಸಿದ್ದು, ಪ್ರತಿಭಟನೆ ನಡೆಸಿದ್ದಾರೆ. ಅಲ್ಲದೇ ರಾಜಾ ಪಟೇರಿಯಾ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಗೃಹ ಸಚಿವರಿಗೆ ಒತ್ತಾಯಿಸಿದ್ದಾರೆ. ಇದರ ಬೆನ್ನಲ್ಲೇ ಗೃಹ ಸಚಿವರ ಸೂಚನೆ ಮೇರೆಗೆ ಮಧ್ಯಪ್ರದೇಶದ ಪನ್ನಾ ಠಾಣೆಯಲ್ಲಿ ಪಟೇರಿಯಾ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.
ವಿವಾದ ಭುಗಿಲೇಳುತ್ತಿದ್ದಂತೆ ವಿಡಿಯೋ ಬಿಡುಗಡೆ ಮಾಡಿ ಸ್ಪಷ್ಟನೆ ನೀಡಿದ ಕಾಂಗ್ರೆಸ್ ನಾಯಕ ರಾಜಾ ಪಟೇರಿಯಾ, ನಿನ್ನೆ ಮಧ್ಯಪ್ರದೇಶದ ಮಂಡಲ್ ಸೆಕ್ಟರ್ ನಲ್ಲಿ ಕಾರ್ಡ್ ಹಂಚಿಕೆ ಕಾರ್ಯಕ್ರಮದಲ್ಲಿ ನಾನು ಪ್ರಧಾನಿ ಮೋದಿ ಹತ್ಯೆ ಮಾಡುವಂತೆ ಹೇಳಿದ ಭಾಷಣವನ್ನು ವೈರಲ್ ಮಾಡಲಾಗುತ್ತಿದೆ. ನಾನು ಹತ್ಯೆ ಮಾಡುವಂತೆ ಹೇಳಿಲ್ಲ. ಪ್ರಧಾನಿ ಮೋದಿಯವರನ್ನು ಸೋಲಿಸುವಂತೆ ಕರೆ ನೀಡಿದ್ದೇನೆ. ಸಂವಿಧಾನ ಉಳಿಸಲು ಮೋದಿಯವರನ್ನು ಸೋಲಿಸಿ ಎಂದು ಹೇಳಿದ್ದೇನೆ. ಆದರೆ ಅನಗತ್ಯವಾಗಿ ನನ್ನ ಹೇಳಿಕೆಯನ್ನು ತಿರುಚಿ ಈ ರೀತಿ ಅಪಪ್ರಚಾರ ಮಾಡಲಾಗುತ್ತಿದೆ. ಕೊಲೆ ಮಾಡಿ ಎಂಬ ಮಾತನ್ನು ನಾನು ಹೇಳಿಲ್ಲ ಎಂದು ಉಲ್ಟಾ ಹೊಡೆದಿದ್ದಾರೆ.
*ನ್ಯಾಯವಾದಿ ಮೇಲೆ ಹಲ್ಲೆ; ಸಬ್ ಇನ್ಸ್ ಪೆಕ್ಟರ್ ಅಮಾನತು*
https://pragati.taskdun.com/mangaloresi-suteshsuspended/
*ಉಸಿರಾಟದ ಸಮಸ್ಯೆ ಹೆಚ್ಚಾಗುವ ಸಾಧ್ಯತೆ; ರಾಜ್ಯದ ಜನತೆಗೆ ಆರೋಗ್ಯ ಸಚಿವ ಸುಧಾಕರ್ ಎಚ್ಚರಿಕೆ*
https://pragati.taskdun.com/karnatakacold-windrainbreathing-problemminister-sudhakarwarning/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ