Latest

ಕೊರೊನಾ ಸೋಂಕಿಗೆ ತುತ್ತಾದ ಕಾಂಗ್ರೆಸ್ ನಾಯಕ ರಣದೀಪ್ ಸುರ್ಜೆವಾಲಾ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ದೇಶಾದ್ಯಂತ ಕೊರೊನಾ ಅಟ್ಟಹಾಸ ಹೆಚ್ಚುತ್ತಿದ್ದು, ಈ ನಡುವೆ ಕಾಂಗ್ರೆಸ್ ನಾಯಕ ರಣದೀಪ್ ಸುರ್ಜೇವಾಲಾ ಕೋವಿಡ್ ಸೋಂಕಿಗೆ ತುತ್ತಾಗಿದ್ದಾರೆ.

ಈ ಕುರಿತು ಸ್ವತ: ಸುರ್ಜೇವಾಲಾ ಮಾಹಿತಿ ನೀಡಿದ್ದು, ನನ್ನ ಕೋವಿಡ್ ಟೆಸ್ಟ್ ನಲ್ಲಿ ಪಾಸಿಟಿವ್ ಬಂದಿದ್ದು, ಕಳೆದ 5 ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದವರು ಕೋವಿಡ್ ಟೆಸ್ಟ್ ಗೆ ಒಳಗಾಗಿ ಸೆಲ್ಫ್ ಐಸೋಲೇಟ್ ಆಗುವಂತೆ ಮನವಿ ಮಾಡಿದ್ದಾರೆ.

ರಣದೀಪ್ ಸುರ್ಜೆವಾಲಾ ಕಳೆದ ಮೂರು ದಿನಗಳ ಹಿಂದೆ ಬೆಳಗಾವಿ ಲೋಕಸಭಾ ಉಪಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡಿದ್ದರಲ್ಲದೇ, ಬೀದರ್ ಹಾಗೂ ಮಸ್ಕಿ ವಿಧಾನಸಭಾ ಕ್ಷೇತ್ರದಲ್ಲೂ ಕಾಂಗ್ರೆಸ್ ಅಭ್ಯರ್ಥಿ ಪರ ಭರ್ಜರಿ ಪ್ರಚಾರ ನಡೆಸಿದ್ದರು. ಇದೀಗ ಕೊರೊನಾ ಸೋಂಕು ಹಿನ್ನೆಲೆಯಲ್ಲಿ ಹೋಂ ಐಸೋಲೇಟ್ ಆಗಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Check Also
Close
Back to top button