ಪ್ರಗತಿವಾಹಿನಿ ಸುದ್ದಿ; ಹೈದರಾಬಾದ್: ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿಯವರನ್ನು ಇಡಿ ವಿಚಾರಣೆಗೊಳಪಡಿಸಿರುವುದನ್ನು ವಿರೋಧಿಸಿ ಕಾಂಗ್ರೆಸ್ ದೇಶಾದ್ಯಂತ ಪ್ರತಿಭಟನೆ ನಡೆಸುತ್ತಿದೆ. ದೆಹಲಿ, ಹೈದರಾಬಾದ್, ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಕೈ ಕಾರ್ಯಕರ್ತರ ಪ್ರತಿಭಟನೆ ತೀವ್ರಸ್ವರೂಪ ಪಡೆದುಕೊಂಡಿದೆ. ಪ್ರತಿಭಟನೆ ವೇಳೆ ಕಾಂಗ್ರೆಸ್ ನಾಯಕಿಯೊಬ್ಬರು ಪೊಲೀಸ್ ಸಿಬ್ಬಂದಿ ಕಾಲರ್ ಹಿಡಿದ ಘಟನೆ ನಡೆದಿದೆ.
ಇಂದು ಹೈದರಾಬಾದ್ ನಲ್ಲಿ ಕಾಂಗ್ರೆಸ್ ನಾಯಕ ರೇವಂತ್ ರೆಡ್ಡಿ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದ್ದು, ಪ್ರತಿಭಟನೆ ವೇಳೆ ಕಾಂಗ್ರೆಸ್ ನಾಯಕಿ ರೇಣುಕಾ ಚೌಧರಿ ಪೊಲೀಸ್ ಸಿಬ್ಬಂದಿ ಕಾಲರ್ ಹಿಡಿದು ದರ್ಪ ಮೆರೆದಿದ್ದಾರೆ.
ತೆಲಂಗಾಣ ಕಾಂಗ್ರೆಸ್ ಹೈದರಾಬಾದ್ ನ ರಾಜಭವನದ ಎದುರು ಪ್ರತಿಭಟನೆ ನದೆಸುತ್ತಿದ್ದು, ಈ ವೇಳೆ ಪೊಲೀಸರು ಕಾಂಗ್ರೆಸ್ ನಾಯಕ ರೇವಂತ್ ರೆಡ್ಡಿಯವರನ್ನು ವಶಕ್ಕೆ ಪಡೆದಿದ್ದಾರೆ. ಕಾಂಗ್ರೆಸ್ ನಾಯಕಿ ರೇಣುಕಾ ಚೌಧರಿಯನ್ನು ಮಹಿಳಾ ಪೊಲೀಸರು ವಶಕ್ಕೆ ಪಡೆಯಲು ಯತ್ನಿಸಿದಾಗ ಇದ್ದಕ್ಕಿದ್ದಂತೆ ಕೆಂಡಾ ಮಂಡಲರಾದ ರೇಣುಕಾ ಚೌಧರಿ ತಮ್ಮ ಹಿಂದೆ ನಿಂತಿದ್ದ ಪೊಲೀಸ್ ಸಿಬ್ಬಂದಿ ಕೊರಳ ಪಟ್ಟಿ ಹಿಡಿದು ಎಳೆದಾಡಿ ವಾಗ್ದಾಳಿ ನಡೆಸಿದ್ದಾರೆ. ಈ ವೇಳೆ ಮಹಿಳಾ ಪೊಲೀಸರು ಅವರನ್ನು ತಡೆದು ಕರೆದೊಯ್ದಿದ್ದಾರೆ.
ಇದಕ್ಕಿಂತ ನೀಚ ಕೆಲಸ ಮತ್ತೊಂದಿಲ್ಲ; ಸಿದ್ದರಾಮಯ್ಯ ಆಕ್ರೋಶ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ