Kannada NewsKarnataka NewsLatest

*ಮೂರು ದಿನಗಳಿಂದ ನಾಪತ್ತೆಯಾಗಿದ್ದ ಕಾಂಗ್ರೆಸ್ ಮುಖಂಡ ಶವವಾಗಿ ಪತ್ತೆ*

ಪ್ರಗತಿವಾಹಿನಿ ಸುದ್ದಿ: ಕಳೆದ ಮೂರು ದಿನಗಳಿಂದ ನಾಪತ್ತೆಯಾಗಿದ್ದ ಕಾಂಗ್ರೆಸ್ ಮುಖಂಡರೊಬ್ಬರು ಶವವಾಗಿ ಪತ್ತೆಯಾಗಿರುವ ಘಟನೆ ಚಿನಡೆದಿದೆ.

ಚಿತ್ರದುರ್ಗ ಜಿಲ್ಲೆಯ ಹೊರವಲಯದಲ್ಲಿ ನಿರ್ಜನ ಪ್ರದೇಶದಲ್ಲಿ ಕಾಂಗ್ರೆಸ್ ಮುಖಂಡನ ಶವ ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾಗಿದೆ. ಶಿವಲಿಂಗಪ್ಪ ಮೃತ ಕಾಂಗ್ರೆಸ್ ಮುಖಂಡ. ಶಿವಲಿಂಗಪ್ಪ ಅವರು ಚಿತ್ರದುರ್ಗದಲ್ಲಿ ರಸಗೊಬ್ಬರ ಅಂಗಡಿ ನಡೆಸುತ್ತಿದ್ದರು.

ಕಳೆದ ಮೂರು ದಿನಗಳಿಂದನಾಪತ್ತೆಯಾಗಿದ್ದರು. ಕುಟುಂಬದವರು ಪೊಲೀಸರಿಗೆ ದೂರು ನೀಡಿದ್ದರು. ಇಂದು ನಿರ್ಜನ ಪ್ರದೇಶದಲ್ಲಿ ಮುಖ ಗುರುತು ಸಿಗದ ಸ್ಥಿತಿಯಲ್ಲಿ ಶಿವಲಿಂಗಪ್ಪ ಶವವಾಗಿ ಪತ್ತೆಯಾಗಿದ್ದಾರೆ.

Home add -Advt

ದುಷ್ಕರ್ಮಿಗಳು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಚಿತ್ರದುರ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Back to top button