ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಿಧಾನಸಭಾ ಚುನಾವಣೆಗೆ ಇನ್ನೇನು ಕೆಲ ದಿನಗಳು ಬಾಕಿಯಿದ್ದು, ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿ ಘೋಷಣೆಗೆ ಬರದ ಸಿದ್ಧತೆ ನಡೆಸಿರುವಾಗಲೇ ಟಿಕೆಟ್ ಆಕಾಂಕ್ಷಿಯೋರ್ವರ ಮನೆ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎನ್ನಲಾಗಿದೆ.
ಕಾಂಗ್ರೆಸ್ ಮುಖಂಡ ಗುರಪ್ಪನಾಯ್ಡು ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಗುರಪ್ಪ ನಾಯ್ಡು ಅವರ ಬೆಂಗಳೂರಿನ ಬನಶಂಕರಿ 2ನೇ ಹಂತದಲ್ಲಿರುವ ಮನೆ ಮೇಲೆ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ ಎಂದು ಸುದ್ದಿಯಾಗಿದೆ.
ಗುರಪ್ಪನಾಯ್ಡು ಬೆಂಗಳೂರಿನ ಪದ್ಮನಾಭನಗರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಆದರೆ ಗುರಪ್ಪ ನಾಯ್ಡು ದಾಳಿ ನಡೆದಿರುವ ಸುದ್ದಿಯನ್ನು ತಳ್ಳಿಹಾಕಿದ್ದಾರೆ.
https://pragati.taskdun.com/it-raidcongress-leadergurappa-naidu/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ