
ಪ್ರಗತಿವಾಹಿನಿ ಸುದ್ದಿ: ನಗರಸಭೆ ಪೌರಾಯುಕ್ತೆಗೆ ನಿಂದನೆ, ಜೀವಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅವರನ್ನು ಕಾಂಗ್ರೆಸ್ ನಿಂದ ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.
ಅಕ್ರಮವಾಗಿ ಅಳವಡಿಸಿದ್ದ ಬ್ಯಾನರ್ ತೆರವುಗೊಳಿಸಿದ್ದಕ್ಕೆ ಚಿಕ್ಕಬಳ್ಳಾಪುರದ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾಗೌಡ ಅವರಿಗೆ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಕರೆ ಮಾಡಿ ನಿಂದಿಸಿದ್ದಲ್ಲದೇ, ಜೀವ ಬೆದರಿಕೆ ಹಾಕಿದ್ದರು. ರಾಜೀವ್ ಗೌಡ, ಪೌರಾಯುಕ್ತಗೆ ಬೆದರಿಕೆ ಹಾಕಿದ್ದ ಆಡಿಯೋ ವೈರಲ್ ಆಗಿತ್ತು. ಇದರ ಬೆನ್ನಲ್ಲೇ ಪೌರಾಯುಕ್ತೆ ಅಮ್ರುತಾ, ರಾಜೀವ್ ಗೌಡ ವಿರುದ್ಧ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ರಾಜೀವ್ ಗೌಡ ವಿರುದ್ಧ ಎಫ್ಐಆರ್ ದಾಖಲಾಗಿತ್ತು.
ಬಂಧನ ಭೀತಿಯಲ್ಲಿರುವ ರಾಜೀವ್ ಗೌಡ ನಿರೀಕ್ಷಣ ಅಜಾಮೀನಿಗಾಗಿ ಸಲ್ಲಿಸಿದ್ದ ಅರ್ಜಿ ವಜಾಗೊಂಡಿದೆ. ಅಲ್ಲದೇ ತನ್ನ ವಿರುದ್ಧದ ಎಫ್ ಐ ಆರ್ ರದ್ದು ಕೋರಿ ಸಲ್ಲಿಸಿದ್ದ ಅರ್ಜಿಯನ್ನೂ ಹೈಕೋರ್ಟ್ ವಜಾಗೊಳಿಸಿದೆ. ಈ ಹಿನ್ನೆಲೆಯಲ್ಲಿ ರಾಜೀವ್ ಗೌಡಗೆ ಬಂಧನ ಭೀತಿ ಇನ್ನಷ್ಟು ಹೆಚ್ಚಾಗಿದೆ. ಈ ನಡುವೆಯೇ ಕಾಂಗ್ರೆಸ್ ಕೂಡ ರಾಜೀವ್ ಗೌಡರನ್ನು ಅಮಾನತುಗೊಳಿಸಿದೆ.
ಕೆಪಿಸಿಸಿ ಶಿಸ್ತುಪಾಲನಾ ಸಮಿತಿ ಶಿಫಾರಸಿನ ಮೇರೆಗೆ ರಾಜೀವ್ ಗೌಡ ಅವರನ್ನು ಕಾಂಗ್ರೆಸ್ ಪಕ್ಷದಿಂದ ಅಮಾನತು ಮಾಡಿ ಆದೇಶ ಹೊರಡಿಸಲಾದೆ.

