Kannada NewsKarnataka NewsNationalPolitics

*ಹೈಕಮಾಂಡ್ ಅಂಗಳದಲ್ಲಿ ಕಾಂಗ್ರೆಸ್ ನಾಯಕರು: ಮಹತ್ವದ ಚರ್ಚೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ಮಾಜಿ ಮುಖ್ಯಮಂತ್ರಿ,  ನೂತನ ಮುಖ್ಯಮಂತ್ರಿ ಹೈಕಮಾಂಡ್ ಭೇಟಿ ಆಗಿದ್ದಾರೆ.‌ ಸಚಿವ ಸಂಪುಟ ವಿಸ್ತರಣೆ ಜೊತೆಗೆ ಕರ್ನಾಟಕದ ಪ್ರಸಕ್ತ ರಾಜಕೀಯ ವಿದ್ಯಮಾನಗಳ ಕುರಿತು ಚರ್ಚೆ ನಡೆಸಿದ್ದಾರೆ.

ಎಐಸಿಸಿ  ಸಂಘಟನಾ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಅವರ ನೇತೃತ್ವದಲ್ಲಿ ಮಹತ್ವದ ಸಭೆಯೊಂದು ನಡೆದಿದೆ. ಈ ಸಭೆಯಲ್ಲಿ ಕರ್ನಾಟಕದ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಹಾಗೂ ಕೆಪಿಸಿಸಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಭಾಗವಹಿಸಿ ಸುದೀರ್ಘ ಚರ್ಚೆ ನಡೆಸಿದ್ದಾರೆ.

Home add -Advt

ಸಭೆಯ ಬಳಿಕ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ಕೆಸಿ ವೇಣುಗೋಪಾಲ್ ಅವರು, ಕರ್ನಾಟಕದ ಸದ್ಯದ ರಾಜಕೀಯ ಪರಿಸ್ಥಿತಿಗಳ ಬಗ್ಗೆ ಸಭೆಯಲ್ಲಿ ಅತ್ಯಂತ ಮುಕ್ತವಾಗಿ ಹಾಗೂ ಸಮಾಲೋಚನಾತ್ಮಕವಾಗಿ ಚರ್ಚಿಸಲಾಗಿದೆ ಎಂದು ತಿಳಿಸಿದ್ದಾರೆ. 

ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದ ಸರ್ಕಾರವು ಜನಪರ ಕಲ್ಯಾಣ ಯೋಜನೆಗಳನ್ನು ಮತ್ತು ಅಭಿವೃದ್ಧಿ ಕಾರ್ಯಸೂಚಿಗಳನ್ನು ಅತ್ಯಂತ ಯಶಸ್ವಿಯಾಗಿ ಮುನ್ನಡೆಸುತ್ತಿದೆ. ಸರ್ಕಾರದ ಉತ್ತಮ ಆಡಳಿತ ಮತ್ತು ಕಾರ್ಯಕ್ಷಮತೆಗೆ ಸಾರ್ವಜನಿಕರಿಂದ ನಿರಂತರವಾಗಿ ಅತ್ಯಂತ ಸಕಾರಾತ್ಮಕ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿವೆ ಎಂದು ಅವರು ಶ್ಲಾಘಿಸಿದ್ದಾರೆ.

ರಾಜ್ಯದಲ್ಲಿ ಸರ್ಕಾರದ ಜನಪರ ಯೋಜನೆಗಳನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಜನರ ಬಳಿಗೆ ಕೊಂಡೊಯ್ಯುವ ಮತ್ತು ಪಕ್ಷದ ಸಂಘಟನೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಈ ನಾಯಕರ ಸಭೆಯು ಅತ್ಯಂತ ಪ್ರಾಮುಖ್ಯತೆಯನ್ನು ಪಡೆದುಕೊಂಡಿದೆ.

ನಿನ್ನೆ ಬೆಳಗ್ಗೆ ರಾಹುಲ್ ಗಾಂಧಿಯವರ ಜೊತೆ ಚರ್ಚೆ ನಡೆಸಲಾಗಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬೆಂಗಳೂರಿನಲ್ಲಿ ಇದ್ದು, ದೆಹಲಿಗೆ ವಾಪಸ್ ಆದ ಬಳಿಕ ಸಚಿವರ ಪಟ್ಟಿಗೆ ಅಂತಿಮ ಮುದ್ರೆ ಬೀಳುವ ಸಾಧ್ಯತೆ ಇದೆ.

Related Articles

Back to top button