ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಆತ್ಮಹತ್ಯೆ ಮಾಡಿಕೊಂಡಿರುವ ಗುತ್ತಿಗೆದಾರ ಸಂತೋಷ ಪಾಟೀಲ ಅವರ ಪತ್ನಿಗೆ ಸಾಂತ್ವನ ಹೇಳಲು ಕಾಂಗ್ರೆಸ್ ಮುಖಂಡರ ತಂಡ ಇಂದು ಸಂಜೆ ಬೆಳಗಾವಿಗೆ ಆಗಮಿಸಲಿದೆ.
ಮಧ್ಯಾಹ್ನ 3 ಗಂಟೆಗೆ ವಿಶೇಷ ವಿಮಾನದ ಮೂಲಕ ಹೊರಟು 4 ಗಂಟೆಗೆ ಬೆಳಗಾವಿ ತಲುಪಲಿದ್ದಾರೆ. ನಂತರ ಸಂತೋಷ ಪಾಟೀಲ ಅವರ ನಿವಾಸಕ್ಕೆ ತೆರಳಿ ಸಾಂತ್ವನ ಹೇಳಲಿದ್ದಾರೆ. ಜೊತೆಗೆ ಪ್ರಕರಣದ ಸಂಪೂರ್ಣ ಮಾಹಿತಿ ಪಡೆಯಲಿದ್ದಾರೆ.
ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ, ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ ಸೇರಿದಂತೆ 8 ಜನರು ಆಗಮಿಸಲಿದ್ದಾರೆ.
ನಾಳೆ ಸಿಎಂ ಮನೆ ಮುತ್ತಿಗೆ
ಸಚಿವ ಈಶ್ವರಪ್ಪ ವಜಾ ಹಾಗೂ ಬಂಧನಕ್ಕೆ ಆಗ್ರಹಿಸಿ ಕಾಂಗ್ರೆಸ್ ನಾಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿವಾಸಕ್ಕೆ ಮುತ್ತಿಗೆ ಹಾಕಲಿದೆ.
ರಾಜ್ಯಾದ ಎಲ್ಲ ಕಡೆಯಿಂದ ಕಾಂಗ್ರೆಸ್ ಶಾಸಕರು, ಮಾಜಿ ಶಾಸಕರು, ಜಿಲ್ಲಾಧ್ಯಕ್ಷರಿಗೆ ಬುಲಾವ್ ನೀಡಲಾಗಿದ್ದು, ದೊಡ್ಡ ಪ್ರಮಾಣದಲ್ಲಿ ಪ್ರತಿಭಟನೆ ನಡೆಯಲಿದೆ.
ಮುಂದಿನ 5 ದಿನಗಳ ಕಾಲ ಭ್ರಷ್ಟ ಸರಕಾರದ ವಿರುದ್ಧ ಪ್ರತಿಭಟನೆ ನಡೆಸಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಮಾಹಿತಿ ನೀಡಿದ್ದಾರೆ.
ಕೆಲವೇ ಕ್ಷಣಗಳಲ್ಲಿ ಈಶ್ವರಪ್ಪ ರಾಜಿನಾಮೆ ಸಾಧ್ಯತೆ: ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ