Wanted Tailor2
Cancer Hospital 2
Bottom Add. 3

ಸರಕಾರ ಪತನ ಹೇಳಿಕೆ; ರಮೇಶ್ ಜಾರಕಿಹೊಳಿ ವಿರುದ್ಧ ಕಾಂಗ್ರೆಸ್ ಪಾಳೇಯ ಕಿಡಿ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಮಹಾರಾಷ್ಟ್ರ ಸರಕಾರದ ಮಾದರಿಯಲ್ಲೇ ರಾಜ್ಯದಲ್ಲೂ ಕಾಂಗ್ರೆಸ್ ಸರಕಾರ ಪತನವಾಗಲಿದೆ ಎಂದು ಭವಿಷ್ಯ ನುಡಿದ ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಅವರ ಮೇಲೆ ಕಾಂಗ್ರೆಸ್ ಪಾಳೇಯ ಮುಗಿಬಿದ್ದಿದೆ.

ಕಾಂಗ್ರೆಸ್ ಪಕ್ಷದ ಹಲವು ಮುಖಂಡರು ಈ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.  ಸಚಿವರಾದ ರಾಮಲಿಂಗಾರೆಡ್ಡಿ, ಜಮೀರ್‌ ಅಹಮ್ಮದ್‌, ಎಸ್‌.ಎಸ್‌.ಮಲ್ಲಿಕಾರ್ಜುನ, ಶಾಸಕರಾದ ಕೆ.ಎಂ.ಶಿವಲಿಂಗೇಗೌಡ, ರಾಜು ಕಾಗೆ ಹಾಗೂ ಶಿವಗಂಗಾ ಬಸವರಾಜ್ ಸೇರಿದಂತೆ ಹಲವು ಕಾಂಗ್ರೆಸ್‌ ನಾಯಕರು ರಮೇಶ್ ಜಾರಕಿಹೊಳಿ ವಿರುದ್ಧ ಕಿಡಿಕಾರಿದ್ದಾರೆ.

ದಾವಣಗೆರೆಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಚಿವರಾದ ಜಮೀರ್‌ ಅಹಮದ್‌ ಹಾಗೂ ಎಸ್‌.ಎಸ್‌.ಮಲ್ಲಿಕಾರ್ಜುನ ಅವರು ಜಾರಕಿಹೊಳಿಯವರ ಹೇಳಿಕೆಯನ್ನು ಖಂಡಿಸಿದ್ದಾರೆ. ಸದ್ಯದ ಪರಿಸ್ಥಿತಿಯಲ್ಲಿ ಆಪರೇಷನ್ ಕಮಲ ಮಾಡುವುದು ಸುಲಭವಿಲ್ಲ. ಅದರೂ ರಮೇಶ ಜಾರಕಿಹೊಳಿ ಸರಕಾರವನ್ನು ತಾನಾಗಿಯೇ ಪತನಗೊಳ್ಳುವ ಬಗ್ಗೆ ಹಗಲುಗನಸು ಕಾಣುತ್ತಿದ್ದಾರೆ ಎಂದು ಲೇವಡಿ ಮಾಡಿದರು.

ಬಿಜೆಪಿಯವರು ಸರಕಾರ ಬೀಳಿಸುವ ಬಗ್ಗೆ ತಿರುಕನ ಕನಸು ಕಾಣುತ್ತಿದ್ದಾರೆ ಎಂದು ತೋಟಗಾರಿಕೆ ಸಚಿವ ಎಸ್‌.ಎಸ್‌. ಮಲ್ಲಿಕಾರ್ಜುನ ಕುಟುಕಿದ್ದಾರೆ. ರಾಜ್ಯ ಸರಕಾರ ತಾನೇ ಪತನವಾಗಲಿದ್ದು ಶೀಘ್ರವೇ ಡಿ.ಕೆ.ಶಿವಕುಮಾರ್‌ ಮಾಜಿ ಡಿಸಿಎಂ ಆಗಲಿದ್ದಾರೆ ಎಂದು ಶಾಸಕ ರಮೇಶ್ ಜಾರಕಿಹೊಳಿ ಹೇಳಿಕೆ ನೀಡಿದ್ದರು.

Bottom Add3
Bottom Ad 2

You cannot copy content of this page