Kannada NewsKarnataka NewsNationalPolitics

*ಸಿಎಂ ಬೆಂಬಲಿಸುವ ಕಾಂಗ್ರೆಸ್ ನಾಯಕರಿಗೆ ನೈತಿಕತೆ ಇಲ್ಲ: ಬಿ.ಎಸ್. ಯಡಿಯೂರಪ್ಪ  ವಾಗ್ದಾಳಿ*

ಪ್ರಗತಿವಾಹಿನಿ ಸುದ್ದಿ : ಸಿಎಂ ಸಿದ್ದರಾಮಯ್ಯನವರ ಕುಟುಂಬ ಮುಡಾದಲ್ಲಿ 14 ನಿವೇಶಗಳನ್ನು ಅಕ್ರಮವಾಗಿ ಕಬಳಿಸಿರುವುದು ಅಕ್ಷಮ್ಯ ಅಪರಾಧ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ವಾಗ್ದಾಳಿ ನಡೆಸಿದರು.

ಮುಡಾ, ವಾಲ್ಮೀಕಿ ಹಗರಣ ವಿರೋಧಿಸಿ ಬಿಜೆಪಿ-ಜೆಡಿಎಸ್‌ವತಿಯಿಂದ ಸಾಗುತ್ತಿರುವ 2ನೇ ದಿನದ ಮೈಸೂರು ಚಲೋ ಪಾದಯಾತ್ರೆಯಲ್ಲಿ ಸಿದ್ದರಾಮಯ್ಯ ಹಾಗೂ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಅವರು ತೀವ್ರವಾಗಿ ಕಿಡಿಕಾರಿದು.

ಮುಡಾ ಅಕ್ರಮಕ್ಕೆ ಕಾಂಗ್ರೆಸ್ ನಾಯಕರ ಸಹಮತವಿದೆಯಾ ಎಂದು ಪ್ರಶ್ನಿಸಿದ ಬಿಎಸ್‌ವೈ ಭ್ರಷ್ಟ ಕಾಂಗ್ರೆಸ್ ಸರ್ಕಾರವನ್ನು ಜನರು 5 ವರ್ಷ ಸಹಿಸುವುದಿಲ್ಲ. ಬದಲಿಗೆ, ಶೀಘ್ರ ಕಿತ್ತು ಎಸೆಯಲಿದ್ದಾರೆ  ಎಂಬುದಕ್ಕೆ ಪಾದಯಾತ್ರೆಗೆ ಸೇರಿರುವ ಈ ಜನಸಾಗರವೇ ಸಾಕ್ಷಿ ಎಂದರು.

ಈ ಮುಡಾ ಹಗರಣದಲ್ಲಿ ಸಿಎಂಗೆ ಬೆಂಬಲಿಸುವ ಕಾಂಗ್ರೆಸ್ ನಾಯಕರಿಗೂ ನೈತಿಕತೆ ಇಲ್ಲ. ನಿಮಗೆ ಮಾನ ಮರ್ಯಾದೆ ಇದ್ದರೆ ಕೂಡಲೇ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ ಎಂದು ಬಿಎಸ್‌ವೈ ಆಗ್ರಹಿಸಿದರು.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button