Latest

ಪ್ರಧಾನಿ ಮೋದಿ ನಾಯಿಯಂತೆ ಸಾಯ್ತಾರೆ…ನಾಲಿಗೆ ಹರಿಬಿಟ್ಟ ಕಾಂಗ್ರೆಸ್ ಮುಖಂಡನ ವಿರುದ್ಧ FIR

ಪ್ರಗತಿವಾಹಿನಿ ಸುದ್ದಿ; ಮುಂಬೈ; ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ವಿರುದ್ಧ ಇಡಿ ವಿಚಾರಣೆ ಖಂಡಿಸಿ ದೇಶಾದ್ಯಂತ ಕಾಂಗ್ರೆಸ್ ಪ್ರತಿಭಟನೆ ತೀವ್ರಗೊಳಿಸಿದ್ದು, ಪ್ರಧಾನಿ ಮೋದಿ, ಕೇಂದ್ರ ಸರ್ಕಾರದ ವಿರುದ್ಧ ಕೈ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರಧಾನಿ ಮೋದಿಯವರನ್ನು ಬೈಯ್ಯುವ ವೇಳೆ ಎಲ್ಲೆ ಮೀರಿ ವಾಗ್ದಾಳಿ ಕಾಂಗ್ರೆಸ್ ಮುಖಂಡರೊಬ್ಬರು ವಾಗ್ದಾಳಿ ನಡೆಸಿದ್ದಾರೆ.

ರಾಹುಲ್ ಗಾಂಧಿ ವಿರುದ್ಧ ಇಡಿ ವಿಚಾರಣೆ ಖಂಡಿಸಿ ಮಹಾರಾಷ್ಟ್ರದ ನಾಗ್ಪುರದಲ್ಲಿ ಕಾಂಗ್ರೆಸ್ ನಡೆಸುತ್ತಿರುವ ಪ್ರತಿಭಟನೆ ವೇಳೆ ಮಾತನಾಡಿದ ಕಾಂಗ್ರೆಸ್ ಮುಖಂಡ ಶೇಖ್ ಹುಸೇನ್, ಪ್ರಧಾನಿ ನರೇಂದ್ರ ಮೋದಿ ನಾಯಿಗಿಂತ ಕಡೆಯಾಗಿ ಸಾಯ್ತಾರೆ. ನಾಯಿಗೆ ಹೇಗೆ ಸಾವು ಬರುತ್ತೋ ಹಾಗೆ ಮೋದಿ ಸಾಯ್ತಾರೆ ಎಂದು ಬಾಯಿಗೆ ಬಂದಂತೆ ಮಾತನಾಡಿದ್ದಾರೆ.

ನಾನು ನೀಡಿದ ಹೇಳಿಕೆ ಬಗ್ಗೆ ನೋಟೀಸ್ ನೀಡಿದರೂ ಪರವಾಗಿಲ್ಲ ಎಂದು ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ಪ್ರಧಾನಿ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ ಶೇಖ್ ಹುಸೇನ್ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಮಾತಿನಬರದಲ್ಲಿ ರಾಜಕಾರಣಿಗಳು ನಾಲಿಗೆ ಹರಿಬಿಡುತ್ತಿದ್ದಾರೆ. ಇಂತವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂಬ ಆಗ್ರಹಗಳು ಕೇಳಿಬಂದಿವೆ.

ಶೇಖ್ ಹುಸೇನ್ ಹೇಳಿಕೆ ವಿವಾದಕ್ಕೀಡಾಗುತ್ತಿದ್ದಂತೆ ಹುಸೇನ್ ವಿರುದ್ಧ ಗಿಟ್ಟಿಖಾಡನ್ ಪೊಲೀಸರು ಎಫ್ ಐ ಆರ್ ದಾಖಲಿಸಿದ್ದಾರೆ.

Home add -Advt

ಅಪಾರ್ಟ್ ಮೆಂಟ್ ನ 11ನೇ ಮಹಡಿಯಿಂದ ಜಿಗಿದ ವೈದ್ಯ; ಆತ್ಮಹತ್ಯೆಗೆ ಶರಣು

Related Articles

Back to top button