Karnataka NewsLatestPolitics

*ಇದೇನಾ ಅಚ್ಚೇ ದಿನ್? ಪೆಟ್ರೋಲ್, ಡೀಸೆಲ್ ದರ ಏರಿಕೆಗೆ ಪ್ರಧಾನಿ ಮೋದಿ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ ಕಿಡಿ*

ಪ್ರಗತಿವಾಹಿನಿ ಸುದ್ದಿ: ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ. ಕೆ ಶಿವಕುಮಾರ್ ಇಂದು ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಜಂಟಿ ಮಾಧ್ಯಮಗೋಷ್ಠಿ ನಡೆಸಿದರು.

ಈ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಪೆಟ್ರೋಲ್, ಡೀಸೆಲ್, ಗ್ಯಾಸ್ ದರ ನಿರಂತರವಾಗಿ ಏರಿಕೆ ಮಾಡುತ್ತಿರುವ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಬಿಜೆಪಿಯವರು ಈ ಹಿಂದೆ ದೇಶದಲ್ಲಿ ಮೋದಿ ಸರ್ಕಾರ ಅಧಿಕಾರಕ್ಕೆ ಬಂದರೆ ಅಚ್ಚೆ ದಿನ್ ಬರುತ್ತದೆ ಎಂದು ಹೇಳಿದ್ದರು. ಪ್ರಧಾನಿ ಮೋದಿ ಅಧಿಕಾರಕ್ಕೆ ಬಂದಾಗಿನಿಂದ ಎಲ್ಲಾ ವಸ್ತುಗಳ ಬೆಲೆ ಏರಿಕೆಯಾಗಿದೆ. ಈಗ 11 ದಿನಗಳಲ್ಲಿ ನಾಲ್ಕು ಬಾರಿ ಪೆಟ್ರೋಲ್, ಡಿಸೆಲ್, ಗ್ಯಾಸ್ ದರ ಏರಿಸಿದ್ದಾರೆ. ಜನಸಾಮಾನ್ಯರ ಬದುಕು ದುಸ್ತರವಾಗಿದೆ. ಇದೇನಾ? ಅಚ್ಚೇ ದಿನ್? ಎಂದು ಪ್ರಶ್ನಿಸಿದರು.

Home add -Advt

ಯುಪಿಎ ಸರ್ಕಾರದ ಅವಧಿಯಲ್ಲಿ ಪೆಟ್ರೋಲ್, ಡೀಸೆಲ್ ದರ ಕಡಿಮೆಯಾಗಿತ್ತು. ಆದರೆ ಈಗ ಪ್ರಧಾನಿ ಮೋದಿ ಸರ್ಕಾರದ ಅವಧಿಯಲ್ಲಿ ಪೆಟ್ರೋಲ್ ಡೀಸೆಲ್ ದರ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಬೆಂಗಳೂರಿನಲ್ಲಿ ಇಂದು ಲೀಟರ್ ಪೆಟ್ರೋಲ್ 110.93 ಪೈಸೆಯಾಗಿದೆ. ವಾಹನ ಸವಾರರು, ಜನಸಾಮನ್ಯರ ಪಾಡೇನಾಗಬೇಕು? ಎಂದು ಕಿಡಿಕಾರಿದರು.

’ಅಚ್ಛೇ ದಿನ್’ ಎಂದು ಜನರಿಗೆ ಟೋಪಿ ಹಾಕಲಾಗುತ್ತಿದೆ

ಬಿಜೆಪಿ ಅಧಿಕಾರಕ್ಕೆ ಬಂದರೆ ಗುಜರಾತ್ ಮಾದರಿ ಸರ್ಕಾರ ಬರುತ್ತದೆ, ಒಳ್ಳೆಯ ದಿನಗಳು ಬರುತ್ತವೆ ಎಂದು ಹೇಳಿ ಜನರಿಗೆ ಟೋಪಿ ಹಾಕಿದ್ದಾರೆ. ಕಳೆದ 11 ದಿನಗಳಿಂದ 4 ಬಾರಿ ಪೆಟ್ರೋಲ್, ಡೀಸೆಲ್ ಹಾಗೂ ಗ್ಯಾಸ್ ದರ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ 110 .93 ರೂ.ಗಳಾಗಿವೆ. ಡೀಸೆಲ್ ದರ 98.89 ರೂ.ಗಳಾಗಿವೆ. 7. 52 ರೂ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಾಗಿದೆ. ಪ್ರಧಾನಿ ಮೋದಿಯವರು ದೇಶವನ್ನು ಲೂಟಿ ಮಾಡುತ್ತಿರುವುದು ರುಜುವಾತಾಗುತ್ತಿದೆ ಎಂದರು.

ಕಚ್ಚಾತೈಲ ದರ ಕಡಿಮೆಯಿದ್ದಾಗಿನ ಲಾಭ ಗ್ರಾಹಕರಿಗೆ ದೊರೆಯಲಿಲ್ಲ

ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದಾಗ 2014ರ ಮೇ ತಿಂಗಳಲ್ಲಿ 71.41 ರೂ. ಪೆಟ್ರೋಲ್ ಲೀ. ಒಂದಕ್ಕೆ ಬೆಲೆಯಿದ್ದರೆ, ಡೀಸೆಲ್ 56.71 ಪೈಸೆಯಿತ್ತು. ಅಂದು 412 ರೂ. ಆಗಿದ್ದ ಗ್ಯಾಸ್ ಸಿಲಿಂಡರ್ ಬೆಲೆ , ಇಂದು 915 ರೂ. ಆಗಿದೆ , ಇದು ದುಪ್ಪಟ್ಟಿಗಿಂತ ಹೆಚ್ಚಾಗಿದೆ. ಮನಮೋಹನ್ ಸಿಂಗ್ ಅವರ ಅವಧಿಯಲ್ಲಿ ಕಚ್ಚಾ ತೈಲದ ಬೆಲೆ ಹೋಲಿಸಿದರೆ ಪ್ರಸ್ತುತ ಬೆಲೆ ಇಳಿದಿದ್ದರೂ ಕೂಡ, ಪೆಟ್ರೋಲ್ ಡೀಸೆಲ್ ಬೆಲೆ ಹೆಚ್ಚುತ್ತಿದೆ. 65 ರಿಂದ 75 ಡಾಲರ್ ಬೆಲೆ ಇದ್ದಾಗ, ಈ ಕಡಿಮೆ ಬೆಲೆಯ ಲಾಭ, ಗ್ರಾಹಕರಿಗೆ ದೊರೆಯಲಿಲ್ಲ. ಪ್ರಸ್ತುತ ಕಚ್ಚಾ ತೈಲದ ಬೆಲೆ 100 ಡಾಲರ್ ಮಿತಿಯೊಳಗಿದ್ದರೂ, ಕೇಂದ್ರ ಸರ್ಕಾರ ಪೆಟ್ರೋಲ್ ಡೀಸೆಲ್ ಬೆಲೆಯನ್ನು ಸತತ ನಾಲ್ಕು ಬಾರಿ ಏರಿಕೆ ಮಾಡಿದೆ. ಇದರಿಂದಾಗಿ ಗ್ರಾಹಕರಿಗೆ, ರೈತರಿಗೆ, ಜನಸಾಮಾನ್ಯರಿಗೆ ಈ ಬೆಲೆಏರಿಕೆಯ ಬಿಸಿ ತಟ್ಟಲಿದೆ. ಮೋದಿಯವರು ದೇಶವನ್ನು ಹಾಗೂ ಜನಸಾಮಾನ್ಯರನ್ನು ಲೂಟಿ ಮಾಡುತ್ತಿದ್ದಾರೆ ಎಂದರು.

ಎ.ಐ.ಸಿ.ಸಿ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವ ದಿನೇಶ್ ಗುಂಡೂರಾವ್, ಅಭಿಷೇಕ್ ದತ್ತಾ ಮೊದಲಾದವರು ಉಪಸ್ಥಿತರಿದ್ದರು.

Related Articles

Back to top button