ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ವಿಧಾನ ಮಂಡಳದ ಅಧಿವೇಶನದ ಮಧ್ಯೆಯೇ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಮತ್ತು ಸಚಿವ ಸಂಪುಟದ ಸಭೆಗೆ ದಿನ ನಿಗದಿಯಾಗಿದೆ.
ವಿಧಾನ ಮಂಡಲದ ಅಧಿವೇಶನ ನಡೆಯುತ್ತಿರುವ ಹಿನ್ನೆಲೆಯಲ್ಲಿ ವಿರೋಧ ಪಕ್ಷಗಳು ಸರ್ಕಾರದ ವಿರುದ್ಧ ಸದನದಲ್ಲಿ ಚರ್ಚಿಸಬಹುದಾದ ವಿಷಯಗಳಿಗೆ ಸಂಬಂಧಿಸಿದಂತೆ ಚರ್ಚಿಸಲು ದಿನಾಂಕ:18-07-2024ರ ಗುರುವಾರ ಸಂಜೆ 6.30 ಗಂಟೆಗೆ ಅರಮನೆ ರಸ್ತೆಯ ಸಿ.ಐ.ಡಿ. ಕಛೇರಿ ಮುಂಭಾಗದಲ್ಲಿರುವ “ಹೋಟೆಲ್ ರಾಡಿಸನ್ ಬ್ಲೂ (ಏಟ್ರಿಯಾ)” ಇಲ್ಲಿ ‘ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ’ಯನ್ನು ಕರೆಯಲಾಗಿದೆ.
ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರು ಹಾಗೂ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಸಭೆಯ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಈ ಸಭೆಯಲ್ಲಿ ರಾಜ್ಯ ಕೆ.ಪಿ.ಸಿ.ಸಿ. ಅಧ್ಯಕ್ಷರು ಹಾಗೂ ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್, ವಿಧಾನ ಪರಿಷತ್ತಿನ ಸಭಾ ನಾಯಕ ಎನ್.ಎಸ್. ಭೋಸರಾಜು ಹಾಗೂ ಪಕ್ಷದ ಎಲ್ಲಾ ಕಾರ್ಯಾಧ್ಯಕ್ಷರುಗಳು ಈ ಸಭೆಯಲ್ಲಿ ಉಪಸ್ಥಿತರಿರುತ್ತಾರೆ.
ಸಚಿವಸಂಪುಟದ ಪ್ರಸಕ್ತ ಸಾಲಿನ 13ನೇ ಸಭೆಯನ್ನು ಸೋಮವಾರ ಸಂಜೆ 6 ಗಂಟೆಗೆ ಕರೆಯಲಾಗಿದೆ.
ವಿಧಾನಸೌಧದ ಸಚಿವಸಂಪುಟ ಸಭಾಂಗಣದಲ್ಲಿ ಸಭೆ ನಡೆಯಲಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ