Kannada NewsKarnataka News

ಬೆಳಗಾವಿಯಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ

ಬೆಳಗಾವಿಯಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ

 ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಬೆಳಗಾವಿ ಗ್ರಾಮೀಣ ಕಾಂಗ್ರೆಸ್ ಭಾನುವಾರ ಬೃಹತ್ ಪ್ರತಿಭಟನೆ ನಡೆಸಿತು. ನಗರದ ಚೆನ್ನಮ್ಮ ವೃತ್ತದಲ್ಲಿ ಮಾನವ ಸರಪಳಿ ನಡೆಸಿ, ರಸ್ತೆ ತಡೆ ಮಾಡಿ ಕಾರ್ಯಕರ್ತರು ಪ್ರತಿಭಟನೆ ಮಾಡಿದರು.

ಕೇಂದ್ರ ಸರಕಾರ ಆದಾಯ ತೆರಿಗೆ ಇಲಾಖೆ ಮತ್ತು ಜಾರಿ ನಿರ್ದೇಶನಾಲಯಗಳನ್ನು ದುರುಪಯೋಗಪಡಿಸಿಕೊಂಡು ಮಾಜಿ ಸಚಿ, ಡಿ.ಕೆ.ಶಿವಕುಮಾರ ಅವರಿಗೆ ಕಿರುಕುಳ ನೀಡುತ್ತಿದೆ ಎಂದು ಕಾರ್ಯಕರ್ತರು ಆರೋಪಿಸಿದರು.

ಡಿ.ಕೆ.ಶಿವಕುಮಾರ ಅವರನ್ನು ಇನ್ನಿಲ್ಲದಂತೆ ಹಿಂಸಿಸಲಾಗುತ್ತಿದೆ. ಅದರ ಹಿಂದೆ ರಾಜಕೀಯ ಷಢ್ಯಂತ್ರವಿದೆ. ತಕ್ಷಣ ಕಿರುಕುಳ ನೀಡುವುದನ್ನು ನಿಲ್ಲಿಸದಿದ್ದಲ್ಲಿ ಪ್ರತಿಭಟನೆಯನ್ನು ತೀವ್ರಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಲಾಯಿತು.

Home add -Advt

ಯುವ ಕಾಂಗ್ರೆಸ್ ಮುಖಂಡ ಮೃಣಾಲ ಹೆಬ್ಬಾಳಕರ್, ತಾಲೂಕು ಪಂಚಾಯಿತಿ ಅಧ್ಯಕ್ಷ ಶಂಕರಗೌಡ ಪಾಟೀಲ, ಸಿ.ಸಿ.ಪಾಟೀಲ, ಯುವರಾಜ ಕದಂ, ಮಹಾಂತೇಶ ಮತ್ತಿಕೊಪ್ಪ, ಅಡಿವೇಶ ಇಟಗಿ ಸೇರಿದಂತೆ ನೂರಾರು ಮುಖಂಡರು, ಕಾರ್ಯಕರ್ತರು ಇದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button