ಸಭೆಯಲ್ಲಿ ಸುದೀರ್ಘ ಚರ್ಚೆಯ ನಂತರ ಗುರುವಾರ ಬೆಳಗ್ಗೆ 9 ಗಂಟೆಗೆ ತುರ್ತು ಪತ್ರಿಕಾಗೋಷ್ಠಿ ನಡೆಸಲು ನಿರ್ಧರಿಸಲಾಗಿದ್ದು, ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ ಕೆ ಹರಿಪ್ರಸಾದ್, ಪ್ರಚಾರ ಸಮಿತಿ ಅಧ್ಯಕ್ಷ ಎಂ ಬಿ ಪಾಟೀಲ್, ಮಾಜಿ ಡಿಸಿಎಂ ಡಾ ಜಿ ಪರಮೇಶ್ವರ, ಮಾಜಿ ಸಚಿವರಾದ ಆರ್ ವಿ ದೇಶಪಾಂಡೆ, ಕೆ ಜೆ ಜಾರ್ಜ್, ರಾಮಲಿಂಗಾರೆಡ್ಡಿ ಮತ್ತಿತರ ಹಿರಿಯ ನಾಯಕರು ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಲಿದ್ದಾರೆ.
ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ತುರ್ತು ಜಂಟಿ ಮಾಧ್ಯಮಗೋಷ್ಠಿ ನಡೆಯಲಿದ್ದು, ಕೆಪಿಸಿಸಿ ಕಾರ್ಯಧ್ಯಕ್ಷರುಗಳು, ಬೆಂಗಳೂರಿನ ಎಲ್ಲ ಶಾಸಕರು, ಹಿರಿಯ ಮುಖಂಡರು ಉಪಸ್ಥಿತರಿರುವರು ಎಂದು ತಿಳಿಸಲಾಗಿದೆ.
ರಾತ್ರೋರಾತ್ರಿ ಸಭೆ ನಡೆಸಿ ತುರ್ತು ಪತ್ರಿಕಾಗೋಷ್ಠಿ ಕರೆದಿರುವುದು ಭಾರೀ ಕುತೂಹಲ ಮೂಡಿಸಿದೆ.
ಶಿಕ್ಷಕರ ವರ್ಗಾವಣೆ ಆಕಾಂಕ್ಷಿಗಳ ಮಾಹಿತಿಗಾಗಿ (ಕಾಯಿದೆಯ ತಿದ್ದುಪಡಿ ಪ್ರಕಾರ)
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ