Latest

Breaking News: ಕಾಂಗ್ರೆಸ್ ರಾತ್ರೋರಾತ್ರಿ ಉನ್ನತ ಮಟ್ಟದ ಸಭೆ: ತುರ್ತು ಪತ್ರಿಕಾಗೋಷ್ಠಿ

 ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಬುಧವಾರ ರಾತ್ರಿ ದಿಢೀರ್ ಉನ್ನತ ಮಟ್ಟದ ಸಭೆ ನಡೆಸಿರುವ ಕಾಂಗ್ರೆಸ್ ಗುರುವಾರ ಬೆಳ್ಳಂಬೆಳಗ್ಗೆ ತುರ್ತು ಪತ್ರಿಕಾಗೋಷ್ಠಿ ಕರೆದಿದೆ.
ಬೆಂಗಳೂರಿನ ಸದಾಶಿವನಗರದಲ್ಲಿ ಸಂಸದ ಡಿ ಕೆ ಸುರೇಶ್ ಅವರ ನಿವಾಸದಲ್ಲಿ ಬುಧವಾರ ರಾತ್ರಿ ನಡೆದ ಕಾಂಗ್ರೆಸ್ ಹಿರಿಯ ಮುಖಂಡರ ಸಭೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಪ್ರಚಾರ ಸಮಿತಿ ಅಧ್ಯಕ್ಷ ಎಂ ಬಿ ಪಾಟೀಲ್, ಮಾಜಿ ಡಿಸಿಎಂ ಡಾ ಜಿ ಪರಮೇಶ್ವರ, ಮಾಜಿ ಸಚಿವರಾದ ಆರ್ ವಿ ದೇಶಪಾಂಡೆ, ಕೆ ಜೆ ಜಾರ್ಜ್, ವಿಧಾನ ಪರಿಷತ್ ವಿರೋಧ ಪಕ್ಷದ ಉಪನಾಯಕ ಕೆ ಗೋವಿಂದರಾಜ್, ಕೆಪಿಸಿಸಿ ಖಜಾಂಚಿ ವಿನಯ್ ಕಾರ್ತಿಕ್ ಮತ್ತಿತರರು ಭಾಗವಹಿಸಿದ್ದರು.

ಸಭೆಯಲ್ಲಿ ಸುದೀರ್ಘ ಚರ್ಚೆಯ ನಂತರ ಗುರುವಾರ ಬೆಳಗ್ಗೆ 9 ಗಂಟೆಗೆ ತುರ್ತು ಪತ್ರಿಕಾಗೋಷ್ಠಿ ನಡೆಸಲು ನಿರ್ಧರಿಸಲಾಗಿದ್ದು, ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ ಕೆ ಹರಿಪ್ರಸಾದ್, ಪ್ರಚಾರ ಸಮಿತಿ ಅಧ್ಯಕ್ಷ ಎಂ ಬಿ ಪಾಟೀಲ್, ಮಾಜಿ ಡಿಸಿಎಂ ಡಾ ಜಿ ಪರಮೇಶ್ವರ, ಮಾಜಿ ಸಚಿವರಾದ ಆರ್ ವಿ ದೇಶಪಾಂಡೆ, ಕೆ ಜೆ ಜಾರ್ಜ್, ರಾಮಲಿಂಗಾರೆಡ್ಡಿ ಮತ್ತಿತರ ಹಿರಿಯ ನಾಯಕರು ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಲಿದ್ದಾರೆ.

ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ತುರ್ತು ಜಂಟಿ ಮಾಧ್ಯಮಗೋಷ್ಠಿ ನಡೆಯಲಿದ್ದು,  ಕೆಪಿಸಿಸಿ ಕಾರ್ಯಧ್ಯಕ್ಷರುಗಳು, ಬೆಂಗಳೂರಿನ ಎಲ್ಲ ಶಾಸಕರು, ಹಿರಿಯ ಮುಖಂಡರು ಉಪಸ್ಥಿತರಿರುವರು ಎಂದು ತಿಳಿಸಲಾಗಿದೆ.

Home add -Advt

ರಾತ್ರೋರಾತ್ರಿ ಸಭೆ ನಡೆಸಿ ತುರ್ತು ಪತ್ರಿಕಾಗೋಷ್ಠಿ ಕರೆದಿರುವುದು ಭಾರೀ ಕುತೂಹಲ ಮೂಡಿಸಿದೆ.

ಶಿಕ್ಷಕರ ವರ್ಗಾವಣೆ ಆಕಾಂಕ್ಷಿಗಳ ಮಾಹಿತಿಗಾಗಿ (ಕಾಯಿದೆಯ ತಿದ್ದುಪಡಿ ಪ್ರಕಾರ)

https://pragati.taskdun.com/for-information-of-teacher-transfer-aspirants/

Related Articles

Back to top button