Kannada NewsLatest

*ಪಾಕ್ ಪರ ಘೋಷಣೆ ವಿಡಿಯೋ ಫೇಕ್ ಎಂದ ನೂತನ ಶಾಸಕ ಆಸೀಫ್ ಸೇಠ್*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಸೋಲು ತುಂಬಾ ಬೇಸರ ತಂದಿದೆ. ಅವರು ಗೆಲ್ಲುವ ನಿರೀಕ್ಷೆ ಇತ್ತು ಎಂದು ಬೆಳಗಾವಿ ಶಾಸಕ ಆಸೀಫ್ ಸೇಠ್ ತಿಳಿಸಿದ್ದಾರೆ.

ಬೆಳಗಾವಿಯಲ್ಲಿ ಮಾತನಾಡಿದ ಆಸೀಫ್ ಸೇಠ್, ಜಗದೀಶ್ ಶೆಟ್ಟರ್ ನನ್ನ ಪರವಾಗಿಯೂ ಪ್ರಚಾರಕ್ಕೆ ಬಂದಿದ್ದರು. ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ನಲ್ಲಿ ಅವರ ಸೋಲು ನೋವು ತಂದಿದೆ ಎಂದು ಹೇಳಿದರು.

ಇದೇ ವೇಳೆ ಬೆಳಗಾವಿಯಲ್ಲಿ ಪಾಕ್ ಪರ ಘೋಷಣೆ ವಿಡಿಯೋ ವೈರಲ್ ವಿಚಾರವಾಗಿ ಸ್ಪಷ್ಟನೆ ನೀಡಿದ ಅವರು, ಆ ವಿಡಿಯೋ ಫೇಕ್. ಈ ಬಗ್ಗೆ ಈ ಹಿಂದೆಯೇ ಸ್ಪಷ್ಟನೆ ಕೊಟ್ಟಿದ್ದೇನೆ. ಬಿಜೆಪಿಯ ಕೆಲವರು ಇಂತಹ ಕೆಲಸ ಮಾಡಿದ್ದಾರೆ. ಚುನಾವಣೆ ಸಂದರ್ಭದಲ್ಲಿಯೂ ಬಿಜೆಪಿಯವರು ಇದನ್ನೇ ಮಾಡಿದ್ದರು. ಈ ಬಗ್ಗೆ ಬೆಳಗಾವಿ ಪೊಲೀಸ್ ಆಯುಕ್ತರನ್ನು ಭೇಟಿಯಾಗಿ ಚರ್ಚಿಸುತ್ತೇನೆ. ಮಾನನಷ್ಟ ಮೊಕದ್ದಮೆ ದಾಖಲಿಸಲು ಸಿದ್ಧತೆ ನಡೆಸಿದ್ದೇನೆ ಎಂದರು.

https://pragati.taskdun.com/m-p-renukacharyapolitical-retiredbjp-supportersprotest/


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button