Kannada NewsKarnataka NewsLatest

*ನನ್ನ ವಿರುದ್ಧದ ಆರೋಪ ತನಿಖೆ ಆಗುವವರೆಗೂ ಅಧಿವೇಶನದಲ್ಲೂ ಭಾಗಿಯಾಗಲ್ಲ ಎಂದ ಕಾಂಗ್ರೆಸ್ ಶಾಸಕ*

ಪ್ರಗತಿವಾಹಿನಿ ಸುದ್ದಿ; ಕಲಬುರ್ಗಿ: ಸಚಿವ ಕೃಷ್ಣಬೈರೇಗೌಡ ವಿರುದ್ಧವೇ ಅಸಮಾಧಾನಗೊಂಡಿರುವ ಕಾಂಗ್ರೆಸ್ ಶಾಸಕ ಬಿ.ಆರ್.ಪಟೀಲ್ ನನ್ನ ವಿರುದ್ಧದ ಆರೋಪ ತನಿಖೆ ಆಗುವವರೆಗೂ ಸದನಕ್ಕೂ ಹೋಗಲ್ಲ, ಅಧಿವೇಶನಕ್ಕೂ ಹೋಗಲ್ಲ ಎಂದು ಪಟ್ಟು ಹಿಡಿದಿದ್ದಾರೆ.

Home add -Advt

ಕಲಬುರ್ಗಿಯಲ್ಲಿ ಮಾತನಾಡಿದ ಶಾಸಕ ಬಿ.ಆರ್.ಪಟೀಲ್, ಸಚಿವ ಕೃಷ್ಣಬೈರೇಗೌಡ ಅವರು ಮಾತನಾಡುವಾಗ ಕಾಮಗಾರಿಗಳ ಬಗ್ಗೆ ಪ್ರಶ್ನೆ ಕೇಳಿದಾಗ ನಾನು ಹಣ ಪಡೆದು ಕೆಲಸ ಕೊಟ್ಟಿದ್ದೇನೆ ಎಂದು ಆರೋಪ ಮಾಡಿದ್ದಾರೆ. ನನ್ನ ವಿರುದ್ಧದ ಆರೋಪದ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದು ಉನ್ನತ ಮಟ್ಟದ ತನಿಖೆ ನಡೆಸಲಿ. ತನಿಖೆ ಮುಗಿಯುವವರೆಗೂ ಸದನಕ್ಕೆ ಹೋಗಲ್ಲ, ಅಧಿವೇಶನದಲ್ಲೂ ಪಾಲ್ಗೊಳ್ಳಲ್ಲ ಎಂದರು.

ನಾನು ಸ್ವಾಭಿಮಾನದಿಂದ ಬದುಕಿದವನು. ಸ್ವಾಭಿಮಾನ ಇಲ್ಲದಿದ್ದರೆ ಬದುಕಿದ್ದರೂ ಸತ್ತಂತೆ. ನನ್ನ ವಿರುದ್ಧ ಆರೋಪ ಮಾಡಿರುವ ವಿಚಾರವಾಗಿಯೇ ಸಿಎಂ ಸಿದ್ದರಾಮಯ್ಯ ನವರಿಗೆ ಪತ್ರ ಬರೆದಿದ್ದೇನೆ. ಸಿಎಂ ಸಭೆ ಕರೆದಿದ್ದಾರೆ. ಬೆಂಗಳೂರಿಗೆ ಹೋಗುತ್ತಿದ್ದೇನೆ. ಸಿಎಂ ಜೊತೆ ಮಾತನಾಡುತ್ತೇನೆ. ಅವರು ಅಧಿಕಾರಿಗಳನ್ನು ಕರೆದು ಮಾಹಿತಿ ಪಡೆಯಲಿ ನಾನು ತಪ್ಪು ಮಾಡಿದ್ದರೆ ಕ್ರಮ ಕೈಗೊಳ್ಳಲಿ ಎಂದು ಹೇಳಿದರು.


Related Articles

Back to top button