*ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ್ ಇನ್ನಿಲ್ಲ*
ಪ್ರಗತಿವಾಹಿನಿ ಸುದ್ದಿ: ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ್ ಹೃದಯಾಘತದಿಂದ ಬೆಂಗಳೂರಿನಲ್ಲಿ ವಿಧಿವಶರಾಗಿದ್ದಾರೆ. ಯಾದಗಿರಿ ಜಿಲ್ಲೆ ಸುರಪುರ ಕ್ಷೇತ್ರದ ಕಾಂಗ್ರೆಸ್ ಶಾಸಕರಾಗಿದ್ದ ರಾಜ ವೆಂಕಟಪ್ಪ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.Home add -Advt ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ರಾಜಾ ವೆಂಕಟಪ್ಪ ನಾಯಕ್ ಕೊನೆಯುಸಿರೆಳೆದಿದ್ದಾರೆ. ಮೊನ್ನೆಯಷ್ಟೇ ಉಗ್ರಾಣ ನಿಗಮದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದರು. ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ರಾಜಾ ವೆಂಕಟಪ್ಪ ನಾಯಕ್, ಕಾಂಗ್ರೆಸ್ ನಿಂದಲೇ ರಾಜಕೀಯ ಜೀವನ ಆರಂಭಿಸಿದ್ದರು. *ಯುವಕನ ಕಿರುಕುಳ; ಮನನೊಂದ 14 ವರ್ಷದ ಬಾಲಕಿ ಆತ್ಮಹತ್ಯೆ*
Copy and paste this URL into your WordPress site to embed
Copy and paste this code into your site to embed