Belgaum NewsKannada NewsKarnataka NewsNationalPolitics
*ಡಿ.ಕೆ.ಶಿವಕುಮಾರ್ ಜೊತೆ ಬಿಹಾರಕ್ಕೆ ತೆರಳಿದ ಕಾಂಗ್ರೆಸ್ ಶಾಸಕರು*

ಪ್ರಗತಿವಾಹಿನಿ ಸುದ್ದಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ವೋಟ್ ಅಧಿಕಾರ ಯಾತ್ರೆಯಲ್ಲಿ ಭಾಗವಹಿಸಲು ಡಿಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ಶಾಸಕರು ಹಾಗೂ ನಾಯಕರು ಬೆಂಗಳೂರಿನಿಂದ ಬಿಹಾರಕ್ಕೆ ವಿಶೇಷ ವಿಮಾನದಲ್ಲಿ ತೆರಳಿದ್ದಾರೆ.
ಡಿಕೆಶಿ ಜೊತೆ ಶಾಸಕರಾದ ಶ್ರೀನಿವಾಸ ಮಾನೆ, ಬಾಬಾಸಾಹೇಬ್ ಪಾಟೀಲ್, ರಾಜು ಸೇಠ್, ರಿಜ್ವಾನ್ ಅರ್ಷದ್, ಬಿ.ಎಂ ನಾಗರಾಜ್, ನಯನಾ ಮೋಟಮ್ಮ, ಅಶೋಕ್ ಪಟ್ಟಣ್, ಆನಂದ್ ಕಡೂರ್, ವೇಣುಗೋಪಾಲ್ ನಾಯಕ್, ಬಸನಗೌಡ ಬಾದರ್ಲಿ, ರಾಷ್ಟ್ರೀಯ ಯುವ ಕಾಂಗ್ರೆಸ್ ನಿಕಟಪೂರ್ವ ಅಧ್ಯಕ್ಷ ಬಿ. ವಿ ಶ್ರೀನಿವಾಸ್, ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ ಗೌಡ ಈ ತಂಡದಲ್ಲಿದ್ದಾರೆ.