Belagavi NewsBelgaum NewsLatestPolitics
*ಬೆಳಗಾವಿ: ಕಾಂಗ್ರೆಸ್ ಕಚೇರಿ ನಿರ್ಮಿಸುವ ಸ್ಥಳ ಪರಿಶೀಲಿಸಿದ ಡಿ.ಕೆ.ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಗ್ರಾಮಾಂತರ ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್ ಕಚೇರಿ ಹಾಗೂ ತರಬೇತಿ ಕೇಂದ್ರ ಸ್ಥಾಪನೆ ಮಾಡಲು ಉದ್ದೇಶಿಸಿರುವ ಹಿಂಡಲಗಾಕ್ಕೆ ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ವೇಳೆ ಎಂಎಲ್ ಸಿ ಚನ್ನರಾಜ ಹಟ್ಟಿಹೊಳಿ ಜತೆಗಿದ್ದರು. ಹಿಂಡಲಗಾ ಬಳಿ ಕಾಂಗ್ರೆಸ್ ಕಚೇರಿ ನಿರ್ಮಿಸುವ ಬಗ್ಗೆ ಉದ್ದೇಶಿಸಲಾಗಿದೆ.
ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ವಿಶೇಷ ಪ್ರಯತ್ನದಿಂದಾಗಿ ಕಾಂಗ್ರೆಸ್ ಕಚೇರಿಗೆ ಜಾಗ ಮಂಜೂರಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ



