
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಬೆಳಗಾವಿ ಗ್ರಾಮೀಣ ಕ್ಷೇತ್ರದ 2 ಕಡೆ ನಡೆದ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಎರಡರಲ್ಲೂ ಕಾಂಗ್ರೆಸ್ ಜಯಭೇರಿ ಭಾರಿಸಿದ್ದು, ಬಿಜೆಪಿ ತೀವ್ರ ಮುಖಭಂಗ ಅನುಭವಿಸಿದೆ.
ಬಿಜಗರ್ಣಿ ಗ್ರಾಮ ಪಂಚಾಯಿತಿಯ 14 ಕ್ಷೇತ್ರಗಳ ಪೈಕಿ ಎಲ್ಲ 14 ಕ್ಷೇತ್ರಗಳನ್ನೂ ಕಾಂಗ್ರೆಸ್ ಗೆದ್ದುಕೊಂಡಿದ್ದು ಬಿಜೆಪಿ ಒಂದೇ ಒಂದು ಕ್ಷೇತ್ರವನ್ನೂ ಗೆಲ್ಲಲು ಸಾಧ್ಯವಾಗಲಿಲ್ಲ. ಎಲ್ಲ ಕಡೆಗಳಲ್ಲಿ ಕಾಂಗ್ರೆಸ್ – ಬಿಜೆಪಿ ನೇರ ಹಣಾಹಣಿ ನಡೆದಿತ್ತು.
ಬೆಳವಟ್ಟಿ ಗ್ರಾಮ ಪಂಚಾಯಿತಿಯಲ್ಲಿ 10 ಕ್ಷೇತ್ರಗಳ ಪೈಕಿ ಕಾಂಗ್ರೆಸ್ 8ರಲ್ಲಿ ಗೆಲುವು ಸಾಧಿಸಿದ್ದು, 2 ಕಡೆ ಬಿಜೆಪಿ ಗೆಲುವು ಸಾಧಿಸಿದೆ. ಇಲ್ಲಿ ಕೂಡ ಕಾಂಗ್ರೆಸ್ -ಬಿಜೆಪಿ ನೇರ ಪೈಪೋಟಿ ನಡೆದಿತ್ತು.
ಕಾಂಗ್ರೆಸ್ ನ ಐತಿಹಾಸಿಕ ಗೆಲುವಿಗೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಹಾಗೂ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಹರ್ಷ ವ್ಯಕ್ತಪಡಿಸಿದ್ದು, ತಮ್ಮ ಮೇಲಿಟ್ಟಿರುವ ವಿಶ್ವಾಸಕ್ಕೆ ಕ್ಷೇತ್ರದ ಜನರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.
ಬೆಳಗಾವಿ ಗ್ರಾಮೀಣ ಕ್ಷೇತ್ರದ ಮತದಾರರು ಕ್ಷೇತ್ರದಲ್ಲಿ ಕಳೆದ 4 ವರ್ಷಗಳಲ್ಲಿ ನಾನು ಕ್ಷೇತ್ರದ ಮನೆ ಮಗಳಾಗಿ ಕೈಗೊಂಡ ಅಭಿವೃದ್ಧಿ ಕಾಮಗಾರಿಗಳನ್ನು ಮೆಚ್ಚಿ ನಮ್ಮನ್ನು ಬೆಂಬಲಿಸಿದ್ದಾರೆ. ನನ್ನ ಮೇಲಿಟ್ಟಿರುವ ವಿಶ್ವಾಸಕ್ಕೆ ನಾನು ಧನ್ಯವಾದಗಳನ್ನು ಸಲ್ಲಿಸುತ್ತೇನೆ. ನನ್ನ ಜವಾಬ್ದಾರಿ ಹೆಚ್ಚಾಗಿದೆ. ಕ್ಷೇತ್ರದ ಮನೆ ಮಗಳಾಗಿ ಅದನ್ನು ಸಮರ್ಥವಾಗಿ ನಿಭಾಯಿಸಲು ಸಿದ್ಧಳಿದ್ದೇನೆ.
-ಲಕ್ಷ್ಮಿ ಹೆಬ್ಬಾಳಕರ್, ಶಾಸಕರು, ಬೆಳಗಾವಿ ಗ್ರಾಮೀಣ ಕ್ಷೇತ್ರ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ