Latest

ಕಾಂಗ್ರೆಸ್ ಮುಳುಗುತ್ತಿರುವ ಹಡಗು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಪ್ರಗತಿವಾಹಿನಿ ಸುದ್ದಿ ಹೊಸಪೇಟೆ: ಕಾಂಗ್ರೆಸ್ ನವರಿಗೆ ರಾಜಕೀಯವಾಗಿ ಭಯವಿದೆ.. ಮಾಡಿದುಣ್ಣೋ ಮಹಾರಾಯ ಎನ್ನುವಂತೆ, ನಿಮಗೆ ಅಧಿಕಾರ ಬಂದಾಗ, ಜನರನ್ನು ಮರೆತಿರಿ. ಈಗ ಕಾಂಗ್ರೆಸ್ ಮುಳುಗುತ್ತಿರುವ ಹಡಗು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ವಿಜಯನಗರ ಜಿಲ್ಲೆಯ ಹೊಸಪೇಟೆಯ ಡಾ. ಪುನೀತ್ ರಾಜಕುಮಾರ್ ಜಿಲ್ಲಾ ಕ್ರೀಡಾಂಗಣದಲ್ಲಿ ಜನ ಸಂಕಲ್ಪ ಯಾತ್ರೆ ಉದ್ಘಾಟಿಸಿ ಮಾತನಾಡಿದರು. ದೀನದಲಿತರು, ವಿದ್ಯಾರ್ಥಿಗಳು, ಮಹಿಳೆಯರು, ಯುವಕರ ಭವಿಷ್ಯ ಭದ್ರಗೊಳಿಸಲಾಗಿದ್ದು ಅವರಿಗೆ ಯಾವುದೇ ಭಯವಿಲ್ಲ. ಆದರೆ ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗಿದವರಿಗೆ ಭಯ ಇದೆ ಎಂದರು.

ಕಾಂಗ್ರೆಸ್ ನ ಭ್ರಷ್ಟಾಚಾರ ಬಣ್ಣ ಬಯಲಾಗುತ್ತದೆ :

ನಿಮ್ಮ ಕಾಲದಲ್ಲಿ ನಡೆದ ಭ್ರಷ್ಟಾಚಾರ ಮುಚ್ಚಿ ಹಾಕಲು ಎಸಿಬಿ ರಚನೆ ಮಾಡಿ ಲೋಕಾಯುಕ್ತ ಮುಚ್ಚುವ ಕೆಲಸ ಮಾಡಿದ್ದಿರಿ.ಈಗ ‌ಲೋಕಾಯುಕ್ತ ಬಲಗೊಂಡಿದೆ. ನೀವು ಮಾಡಿರುವ ಎಲ್ಲ ಹಗರಣಗಳು ಬೆಳಕಿಗೆ ಬರುತ್ತಿವೆ. ನಿಮ್ಮ ವಿರುದ್ದ ದ ಪ್ರಕರಣಗಳ ತನಿಖೆಯಾಗುತ್ತದೆ. ತಪ್ಪು ಮಾಡಿದವರಿಗೆ ಶಿಕ್ಷೆಯಾಗುತ್ತದೆ. ಆಗ ಕಾಂಗ್ರೆಸ್ ನ ಭ್ರಷ್ಟಾಚಾರ ಬಣ್ಣ ಬಯಲಾಗುತ್ತದೆ ಎಂದರು.

ಎಸ್ಸಿ, ಎಸ್ಟಿ ಸಮುದಾಯವರಿಗೆ ನ್ಯಾಯ ಕೊಡಿಸುತ್ತೇನೆ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button