GIT add 2024-1
Beereshwara 33

ಕಾಂಗ್ರೆಸ್ ಪಕ್ಷ ಹಣ ಬಲದಿಂದ ಚುನಾವಣೆ ಎದುರಿಸುತ್ತಿದೆ: ಬಿಜೆಪಿ

Anvekar 3
Cancer Hospital 2

ಪ್ರಗತಿವಾಹಿನಿ ಸುದ್ದಿ, ಚಿಕ್ಕೋಡಿ: ರಾಜ್ಯದ ಎಲ್ಲ 28 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸುತ್ತದೆ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ರಾಧಾ ಮೋಹನ ಅಗರವಾಲ್ ಹೇಳಿದ್ದಾರೆ.

ಚಿಕ್ಕೋಡಿ ಪಟ್ಟಣದ ಹೋರವಲಯದ ಕವಟಗಿಮಠ ಫಾರ್ಮಹೌಸ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು  ಹಣ ಬಲದಿಂದ ಕಳೆದ ಬಾರಿ ಸೋತಿದ್ದ ಬೆಂಗಳೂರು ಗ್ರಾಮಾಂತರ ಕ್ಷೇತ್ರವನ್ನ ಈ ಬಾರಿ ಗೆಲ್ಲಲಿದ್ದೇವೆ. ಚಿಕ್ಕೋಡಿಯಲ್ಲಿ ಅಣ್ಣಾಸಾಹೇಬ ಜೊಲ್ಲೆ ಈ ಬಾರಿಯೂ ಐತಿಹಾಸಿಕ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ. ಚಿಕ್ಕೋಡಿಯಲ್ಲಿ ಎಲ್ಲ ನಾಯಕರು ಒಗ್ಗಟ್ಟಾಗಿ ಕೆಲಸ ಮಾಡುತ್ತಿದ್ದಾರೆ. ಚಿಕ್ಕೋಡಿಯಲ್ಲಿ ಯಾವುದೇ ಅಡಜಸ್ಟಮೆಂಟ್ ರಾಜಕಾರಣ ನಡೆಯುತ್ತಿಲ್ಲ ಎಂದರು.

 ಕರ್ನಾಟಕ ರಾಜ್ಯದಲ್ಲಿ ಮೋದಿಗೆ ಜನ ಮನ್ನಣೆ ಕೊಡುವದು ನಿಶ್ಚಿತ ಎಂದರು.

Emergency Service

ಕಾಂಗ್ರೆಸ್ ಪಕ್ಷ ಹಣ ಬಲದಿಂದ ಲೋಕಸಭಾ ಚುನಾವಣೆ ಎದುರಿಸುತ್ತಿದೆ. ಎಷ್ಟೇ ಹಣ ಬಲ ಪ್ರಯೋಗಿಸಿದರೂ ಕರ್ನಾಟಕದಲ್ಲಿ ಬಿಜೆಪಿ ಎಲ್ಲ ಕ್ಷೇತ್ರಗಳಲ್ಲೂ ಗೆಲ್ಲಲಿದೆ. ಕರ್ನಾಟಕದಲ್ಲಿ ಜನರಿಗೆ ಭಿಕ್ಷೆ ರೂಪದಲ್ಲಿ ಗ್ಯಾರಂಟಿ ಯೋಜನೆ ನೀಡಲಾಗುತ್ತಿದೆ.

ಚುನಾವಣೆಯಲ್ಲಿ ಕಾಂಗ್ರೆಸ್ ಸೋಲನ್ನೊಪ್ಪಿದ ನಂತರ ಗ್ಯಾರಂಟಿ ಯೋಜನೆ ಸ್ಥಗಿತಗೊಳ್ಳಲಿವೆ.

ಚಿಕ್ಕೋಡಿಯಲ್ಲಿ ರಮೇಶ ಜಾರಕಿಹೊಳಿ ಪ್ರಚಾರಕ್ಕೆ ಗೈರು ವಿಚಾರ , ರಮೇಶ ಜಾರಕಿಹೊಳಿ, ಬಾಲಚಂದ್ರ ಜಾರಕಿಹೊಳಿ ಅವರಿಗೆ ಬೆಳಗಾವಿಯಲ್ಲಿ ಶೆಟ್ಟರ ಗೆಲ್ಲಿಸಲು ಜವಾಬ್ದಾರಿ ನೀಡಲಾಗಿದೆ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ರಾಧಾ ಮೋಹನ ಅಗರವಾಲ್ ಹೇಳಿದರು.

ಈ ಸಂದರ್ಭದಲ್ಲಿ ಸಂಸದ ಅಣ್ಣಾಸಾಹೇಬ‌ ಜೊಲ್ಲೆ, ಶಾಸಕರಾದ ದುರ್ಯೋಧನ ಐಹೋಳೆ, ಮಹೇಶ ತೆಗಿನಕಾಯಿ, ಶಶಿಕಲಾ ಜೊಲ್ಲೆ, ವಿಧಾನಪರಿಷತ್ ಮಾಜಿ ಸದಸ್ಯ ಮಹಾಂತೇಶ ಕವಟಗಿಮಠ, ಚಿಕ್ಕೋಡಿ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ ಅಪ್ಪಾಜಿಗೋಳ, ಡಾ! ರಾಜೇಶ ನೆರ್ಲಿ, ಬಾಳಾಸಾಬ ವಡ್ಡರ,ಚಂದ್ರಶೇಖರ ಕವಟಗಿ ಸೇರಿದಂತೆ ಇನ್ನಿತರರು ಉಪಸ್ಥಿತಿರಿದ್ದರು.

Laxmi Tai add
Bottom Add3
Bottom Ad 2