*ಡಿಕೆಶಿ ಸಿಎಂ ಆಗದಿದ್ದರೆ ಕಾಂಗ್ರೆಸ್ ಪಕ್ಷ ಸರ್ವನಾಶ: ಡಿಕೆಶಿ ಪರ ಮಠಾಧೀಶರ ಬ್ಯಾಂಟಿಗ್*

ಪ್ರಗತಿವಾಹಿನಿ ಸುದ್ದಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಸಿಎಂ ಮಾಡಬೇಕು ಎಂದು ಹಿಂದುಳಿದ ಸಮುದಾಯದ ಮಠಾಧೀಶರು ಸಭೆ ನಡೆಸಿದ್ದಾರೆ.
ಬ್ರಹ್ಮಶ್ರೀ ನಾರಾಯಣ ಗುರುಶಕ್ತಿಪೀಠದ ರಾಜ್ಯಾಧ್ಯಕ್ಷರಾದ ಪ್ರಣವಾನಂದ ಶ್ರೀಗಳ ನೇತೃತ್ವದಲ್ಲಿ ಹಿಂದುಳಿದ ಮಠಾಧೀಶರ ಮಹಾಸಭೆ ಡಿಕೆಶಿ ಪರ ಬಹಿರಂಗ ಬೆಂಬಲ ವ್ಯಕ್ತಪಡಿಸಿದೆ.
ಈ ಸಂಬಂಧ ಹತ್ತರಿಂದ ಹದಿನೈದು ಮಂದಿ ಮಠಾಧೀಶರು ದೆಹಲಿಗೆ ತೆರಳಿ ಕಾಂಗ್ರೆಸ್ ಹೈಕಮಾಂಡ್ ನಾಯಕರಾದ ರಾಹುಲ್ ಗಾಂಧಿ ಹಾಗೂ ಕೆ.ಸಿ. ವೇಣುಗೋಪಾಲ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸುವುದಾಗಿ ತಿಳಿಸಿದ್ದಾರೆ.
ಡಿ.ಕೆ. ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಮಾಡದೇ ಹೋದರೆ ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ಹೊಡೆತ ಬೀಳಲಿದೆ ಎಂದು ಪ್ರಣವಾನಂದ ಶ್ರೀಗಳು ಎಚ್ಚರಿಕೆ ನೀಡಿದ್ದಾರೆ. ಡಿಕೆಶಿಗೆ ಅವಕಾಶ ನೀಡದಿದ್ದರೆ ಪಕ್ಷ ಸರ್ವನಾಶದ ಹಾದಿಗೆ ಹೋಗುವ ಸಾಧ್ಯತೆ ಇದೆ ಎಂದೂ ಅವರು ಹೇಳಿದ್ದಾರೆ.
ಅಧಿವೇಶನದ ಕಡೇ ದಿನ ಸಿಎಂ ಸಿದ್ದರಾಮಯ್ಯ ಎರಡೂವರೆ ವರ್ಷ ಸಿಎಂ ಎಂದು ತೀರ್ಮಾನ ಆಗಿಲ್ಲ. ಈಗ ನಾನೇ ಮುಖ್ಯಮಂತ್ರಿ, ಮುಂದೆಯೂ ನಾನೇ ಇರುತ್ತೇನೆ. ಈಗ ನಾನು ಸಿಎಂ ಆಗಿದ್ದೇನೆ, ನನ್ನ ಪ್ರಕಾರ ಹೈಕಮಾಂಡ್ ನನ್ನ ಪರವೇ ಇದೆ. ಈಗಲೂ ನಾನೇ ಮುಖ್ಯಮಂತ್ರಿ, ಹೈಕಮಾಂಡ್ ಹೇಳೋವರೆಗೂ ನಾನೇ ಮುಖ್ಯಮಂತ್ರಿ ಎಂದು ಹೇಳುವ ಮೂಲಕ ಫುಲ್ ಟರ್ಮ್ ಸಿಎಂ ನಾನು ಆಗಿರುತ್ತೇನೆ ಎಂದು ಸಿದ್ದರಾಮಯ್ಯ ಬ್ರಹ್ಮಾಸ್ತ್ರ ಪ್ರಯೋಗಿಸಿದ್ದರು.



