Kannada NewsKarnataka NewsPolitics

*ಕಾಂಗ್ರೆಸ್ ಪ್ರತಿಭಟನೆ: ರಾಜಭವನಕ್ಕೆ ಮುತ್ತಿಗೆ ಹಾಕಲು ಯತ್ನ*

ಪ್ರಗತಿವಾಹಿನಿ ಸುದ್ದಿ : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಸಲ್ಲಿಕೆಗೆ ಅನುಮತಿ ನೀಡಿದ ರಾಜ್ಯಪಾಲರ ನಿರ್ಣಯವನ್ನು ಖಂಡಿಸಿ ಇಂದು ರಾಜ್ಯಾದ್ಯಂತ ಕಾಂಗ್ರೆಸ್ ಪ್ರತಿಭಟನೆಯನ್ನು ಹಮ್ಮಿಕೊಂಡಿದೆ. ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ಚುರುಕಾಗಿ ಆರಂಭಗೊಂಡಿದ್ದು, ಬೆಂಗಳೂರಿನಲ್ಲಿ ರಾಜಭವನಕ್ಕೆ ಮುತ್ತಿಗೆ ಹಾಕಲು ಯತ್ನಿಸಲಾಗಿದೆ.

ರಾಜ್ಯಪಾಲರ ನಿವಾಸಕ್ಕೆ ಮುತ್ತಿಗೆ ಹಾಕಲು ಮುಂದಾದ 20 ಕ್ಕೂ ಹೆಚ್ಚು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಗರದ ಸ್ವಾತಂತ್ರ್ಯ ಉದ್ಯಾನವನದಲ್ಲಿ ಪ್ರತಿಭಟನೆ ಆರಂಭಗೊಂಡಿದ್ದು ಕಾಂಗ್ರೆಸ್ ನಾಯಕರು ಆಗಮಿಸುತ್ತಿದ್ದಾರೆ. ಸಿಎಂ, ಡಿಸಿಎಂ ಸೇರಿದಂತೆ ಹಲವು ಸಚಿವರೂ ಸಹ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿರುವುದರಿಂದ ಪ್ರದೇಶದಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಆಯೋಜಿಸಲಾಗಿದೆ.

ಮೈಸೂರು, ತುಮಕೂರು, ಬೆಳಗಾವಿ, ದಾವಣಗೆರೆ ಮುಂತಾದೆಡೆ ಕಾಂಗ್ರೆಸ್ ಕಾರ್ಯಕರ್ತರು ಬೀದಿಗಿಳಿದು ಸಿಎಂ ಪರ ಘೋಷಣೆ ಕೂಗಿ ರಾಜ್ಯಪಾಲರ ವಿರುದ್ದ ಧಿಕ್ಕಾರ ಕೂಗಿದ್ದಾರೆ. ಮಂಡ್ಯದಲ್ಲಿ ಅಹಿಂದ ಬಳಗ ಮತ್ತು ಕಾಂಗ್ರೆಸ್ ಕಾರ್ಯಕರ್ತರು ರಸ್ತೆ ತಡೆ ನಡೆಸಿದ್ದಾರೆ. ನರಸೀಪುರದಲ್ಲಿ ಇಂದು ಬಂದ್ ಗೆ ಕರೆ ನೀಡಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button