ಪ್ರಗತಿವಾಹಿನಿ ಸುದ್ದಿ: ರಾಜ್ಯಕ್ಕೆ ಬರ ಪರಿಹಾರ ಹಣ ಬಿಡುಗಡೆ ಮಾಡುವಂತೆ ಆಗ್ರಹಿಸಿ ಕೇಂದ್ರ ಸರ್ಕರದ ವಿರುದ್ಧ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದ್ದಾರೆ.
ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವರು, ಶಾಸಕರು ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಪ್ರತಿಭಟನೆ ನಡೆಸಿದರು. ರಾಜ್ಯಕ್ಕೆ ಕೊಡಬೇಕಿರುವ 18 ಸಾವಿರದ 172 ಕೋಟಿ ಬರ ಪರಿಹಾರ ಹಣವನ್ನು ತಕ್ಷಣ ಬಿಡುಗಡೆ ಮಾಡುವಂತೆ ಆಗ್ರಹಿಸಿದರು.
ರಾಜ್ಯದಲ್ಲಿ ಭೀಕರ ಬರಗಾಲದಿಂದ ರೈತರು ತತ್ತರಿಸಿದ್ದಾರೆ. ಇಂದು ರಾಜ್ಯಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮಿಸುತ್ತಿದ್ದು, ಸುಪ್ರೀಂ ಕೋರ್ಟ್ ನಲ್ಲಿ ಈಗಾಗಲೇ ಬರ ಪರಿಹಾರ ನೀಡುವುದಾಗಿ ಒಪ್ಪಿಕೊಂಡಂತೆ ತಕ್ಷಣ ಬರ ಪರಿಹಾರ ಕೊಟ್ಟು ರಾಜ್ಯಕ್ಕೆ ಬನ್ನಿ ಎಂದು ಆಗ್ರಹಿಸಿದೆ.
ಕರ್ನಾಟಕಕ್ಕೆ ಅನ್ಯಾಯ ಮಾಡಿರುವ ಪ್ರಧಾನಿ ಮೋದಿ ರಾಜ್ಯಕ್ಕೆ ನೀಡಿದ್ದು ಖಾಲಿ ಚೊಂಬು, ಚೊಂಬೇಶ್ವರ ಎಂದು ಇದೇ ವೇಳೆ ಕಾಂಗ್ರೆಸ್ ನಾಯಕರು ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ