ಪ್ರಗತಿವಾಹಿನಿ ಸುದ್ದಿ, ಬೆಳಗಾವಿ:
ಭಾರತೀಯ ಜನತಾಪಾರ್ಟಿ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡುತ್ತಿದೆ ಎಂದು ಆರೋಪಿಸಿ ಬೆಳಗಾವಿಯಲ್ಲಿ ಇಂದು ಕಾಂಗ್ರೆಸ್ ಪ್ರತಿಭಟನೆ ನಡೆಸಿತು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ವಿನಯ ನಾವಲಗಟ್ಟಿ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ, ಬಿಜೆಪಿ ಶಾಸಕರನ್ನು ಖರೀದಿಸುವ ಮೂಲಕ ಸಮ್ಮಿಶ್ರ ಸರಕಾರ ಅಸ್ಥಿರಗೊಳಿಸಲು ನಿರಂತರ ಪ್ರಯತ್ನ ಮಾಡುತ್ತಿದೆ. ಬಿಜೆಪಿಯವರಿಗೆ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಲ್ಲ. ತಕ್ಷಣ ಇಂದ ಕ್ಷುಲ್ಲಕ ರಾಜಕಾರಣ ಬಿಡಬೇಕು ಎಂದು ಆಗ್ರಹಿಸಲಾಯಿತು.
ಪರಶುರಾಮ ವಗ್ಗಣ್ಣವರ್, ಸಲೀಮ್ ಖತೀಬ್, ರಸೂಲ್ ಮುಲ್ಲಾ, ಜಯಶ್ರೀ ಮಾಳಗಿ, ವಿಜಯಾ ಹಿರೇಮಠ, ಅನ್ನಪೂರ್ಣ ಅಸರಕರ್, ಲತಾ ಅಸರಕರ್ ಮೊದಲಾದವರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ