ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬಿಜೆಪಿ ಸರ್ಕಾರದ ಭ್ರಷ್ಟಾಚಾರ, ಲಂಚಾವತಾರ, ಹಗರಣಗಳ ವಿರುದ್ಧ ಧ್ವನಿಯೆತ್ತಿರುವ ಕಾಂಗ್ರೆಸ್ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 300 ಸ್ಥಳಗಳಲ್ಲಿ ಏಕಕಾಲದಲ್ಲಿ ಕಾಂಗ್ರೆಸ್ ಪ್ರತಿಭಟನೆ ನಡೆಸಿತು.
ಬೆಂಗಳೂರಿನ 250 ಸಿಗ್ನಲ್, 26 ಫ್ಲೈಓವರ್, 25 ಮೆಟ್ರೋ ನಿಲ್ದಾಣ ಹಾಗೂ ಮಾಲ್ ಗಳ ಎದುರು ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ಮೌನ ಪ್ರತಿಭಟನೆ ನಡೆಸಿ, ರಾಜ್ಯ ಸರ್ಕಾರದ ವಿರುದ್ಧ ಬಿತ್ತಿ ಪತ್ರಗಳನ್ನು ಹಿಡಿದು ಆಕ್ರೋಶ ವ್ಯಕ್ತಪಡಿಸಿದರು.
ಟ್ರಿನಿಟಿ ಸರ್ಕಲ್ ಬಳಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭಾ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್, ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ಸೇರಿದಂತೆ ಅನೇಕ ಮುಖಂಡರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಈ ವೇಳೆ ಮಾತಾನಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ಲಂಚ ಕೊಡದಿದ್ದರೆ ರಾಜ್ಯ ಬಿಜೆಪಿ ಸರ್ಕಾರದಲ್ಲಿ ಯಾವುದೇ ಒಂದು ಕೆಲಸವೂ ನಡೆಯುವುದಿಲ್ಲ. ವಿಧಾನಸೌಧದ ಗೋಡೆಗಳು ಸರ್ಕಾರದ ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಿವೆ. ಡಿಸಿಪಿ, ಎಸ್ ಪಿ ಪೋಸ್ಟಿಂಗ್ ಗೂ ಲಂಚಕೊಡಬೇಕಾದ ಸ್ಥಿತಿಯಿದೆ ಎಂದು ವಾಗ್ದಾಳಿ ನಡೆಸಿದರು.
ಸರ್ಕಾರದ ಭ್ರಷ್ಟಾಚಾರಕ್ಕೆ ಜನ ಇಂದು ಬೇಸತ್ತು ಹೋಗಿದ್ದಾರೆ. ಪ್ರತಿಯೊಂದು ಇಲಕಹೆಯಲ್ಲಿ, ನೇಮಕಾತಿಗಳಲ್ಲಿ ಹಗರನಗಳನ್ನು ನಡೆಸುತ್ತಿದ್ದಾರೆ. ಹಾಗಾಗಿ ಸರ್ಕಾರದ ವಿರುದ್ಧ ಬೆಂಗಳೂರಿನಾದ್ಯಂತ ಮೌನ ಪ್ರತಿಭಟನೆ ನಡೆಸಿದ್ದೇವೆ ಎಂದು ಹೇಳಿದರು.
https://pragati.taskdun.com/cm-basavaraj-bommaicongress-protestreactionbelagavi/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ