Karnataka NewsLatestPolitics
*ಕಾಂಗ್ರೆಸ್ ನ ಮೂವರು ಕಾರ್ಯಕರ್ತರು ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರ ನಡೆ ಖಂಡಿಸಿ ರಾಜ್ಯಾದ್ಯಂತ ಕಾಂಗ್ರೆಸ್ ಹಾಗೂ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿದ್ದು, ಹಲವೆಡೆ ಕಲ್ಲು ತೂರಾಟ ಪ್ರಕರಣಗಳು ನಡೆದಿದೆ.
ಮಂಗಳೂರು ಪಾಲಿಕೆ ಕಚೇರಿ ಮುಂಭಾಗ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದ ವೇಳೆ ಉದ್ರಿಕ್ತರು ಬಸ್ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಖಾಸಗಿ ಬಸ್ ಮೇಲೆ ಕಲ್ಲು ತೂರಾಟ ನಡೆಸಲಾಗಿದ್ದು, ಈ ವೇಳೆ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.
ಮಂಗಳೂರು ಪಾಲಿಕೆ ನಾಮನಿರ್ದೇಶಿತ ಸದಸ್ಯ ಕಿಶೋರ್ ಶೆಟ್ಟಿ, ಶಾಹುಲ್ ಹವೀದ್, ಅನ್ವರ್ ಬಂಧಿತರು. ಪೊಲಿಸರ ಎದುರಲ್ಲೇ ಈ ಮೂವರು ಕಾರ್ಯಕರ್ತರು ಬಸ್ ಮೇಲೆ ಕಲ್ಲು ತೂರಾಟ ನಡೆಸಿ ಬಸ್ ನ ಗಾಜು ಪುಡಿ ಪುಡಿ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಪೊಲಿಸರು ಮೂವರು ಕಾಂಗ್ರೆಸ್ ಕಾರ್ಯಕರ್ತರನ್ನು ಬಧಿಸಿದ್ದಾರೆ.




