
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸಚಿವ ಕೆ.ಎಸ್.ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ನಾಯಕರು ಸದನದಲ್ಲಿಯೂ ನಡೆಸುತ್ತಿರುವ ಪ್ರತಿಭಟನೆಗೆ ಕಿಡಿ ಕಾರಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಚರ್ಚೆ ನಡೆಸಲು ಸಾಕಷ್ಟು ವಿಚಾರಗಳಿವೆ ಅದೆಲ್ಲವನ್ನೂ ಬಿಟ್ಟು ಈ ವಿಚಾರವಾಗಿ ಧರಣಿ ನಡೆಸುತ್ತಿರುವುವುದು ಸರಿಯಲ್ಲ ಎಂದಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಕಾಂಗ್ರೆಸ್ ನಾಯಕರಿಗೆ ರಾಜ್ಯದ ಹಿತಾಸಕ್ತಿ ಬೇಕಿಲ್ಲ. ಈಗ ಸದನದಲ್ಲಿ ಅಹೋರಾತ್ರಿ ಧರಣಿ ನಡೆಸಲು ಮುಂದಾಗಿದ್ದಾರೆ. ಇದು ನಿಜಕ್ಕೂ ಕೆಳಮಟ್ಟಕ್ಕೆ ಹೋಗುವ ರಾಜಕಾರಣ ಎಂದು ಆಕ್ರೋಶ ವ್ಯಕ್ತಪಡಿಸಿದರು.
ವಿಧಾನಸಭೆ, ಪರಿಷತ್ ನಲ್ಲಿಯೂ ಕಾಂಗ್ರೆಸ್ ಗದ್ದಲ ವಿಚಾರವಾಗಿ ಮಾತನಾಡಿದ ಸಿಎಂ, ಶಾಂತಿ-ಸೌಹಾರ್ದತೆ ಕಾಪಾಡುವುದು ನಮ್ಮ ಜವಾಬ್ದಾರಿ. ಸ್ಪೀಕರ್ ಕಚೇರಿಯಲ್ಲಿಯೂ ಸಂಧಾನ ಸಭೆ ನಡೆಸಲಾಯಿತು, ಯಾವುದೇ ಮನವೊಲಿಕೆಗೂ ಒಪ್ಪುತ್ತಿಲ್ಲ, ಅಹೋರಾತ್ರಿ ಧರಣಿ ಮಾಡುತ್ತೇವೆ ಅಂತಿದ್ದಾರೆ. ಕಾಂಗ್ರೆಸ್ ನವರಿಗೆ ಜನರ ಹಿತಾಸಕ್ತಿಗಿಂತ ರಾಜಕಾರಣವೇ ಮುಖ್ಯವಾಗಿದೆ. ಕೇವಲ ರಾಜಕೀಯಕ್ಕಾಗಿ ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ಗುಡುಗಿದರು.
ಹೇಗೆ ರಾಜೀನಾಮೆ ಕೊಡಿಸಬೇಕು ಗೊತ್ತಿದೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ