Kannada NewsKarnataka NewsLatestPolitics

*ಕಾಂಗ್ರೆಸ್ ನಾಯಕರಿಂದ ಮೌನ ಪ್ರತಿಭಟನೆ; ಕಡತಗಳನ್ನು ಫ್ರೀಡಂ ಪಾರ್ಕ್ ಗೆ ತಂದ ಅಧಿಕಾರಿಗಳು*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕಾಂಗ್ರೆಸ್ ನಾಯಕರು ಬೆಂಗಳೂರು ಫ್ರೀಡಂ ಪಾರ್ಕ್ ನಲ್ಲಿ ಮೌನ ಪ್ರತಿಭಟನೆ ನಡೆಸುತ್ತಿದ್ದು, ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು, ಸಚಿವರು ಧರಣಿಯಲ್ಲಿ ಭಾಗಿಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಅಧಿಕರಿಗಳು ಕಡತಗಳನ್ನು ಧರಣಿ ಜಾಗಕ್ಕೆ ತೆಗೆದುಕೊಂಡು ಬಂದಿದ್ದಾರೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಂಸತ್ ಸ್ಥಾನ ಅನರ್ಹತೆಯಲ್ಲಿ ಬಿಜೆಪಿ ಷಡ್ಯಂತ್ರ ಖಂಡಿಸಿ ಕಾಂಗ್ರೆಸ್ ನಾಯಕರು ಮೌನ ಪ್ರತಿಭಟನೆ ನಡೆಸಿದ್ದಾರೆ. ಬಾಯಿಗೆ ಕಪ್ಪು ಪಟ್ಟಿ ಧರಿಸಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ ಕೆ ಶಿವಕುಮಾರ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಸಚಿವರಾದ ರಾಮಲಿಂಗಾರೆಡ್ಡಿ, ಬೋಸರಾಜ್, ಎಐಸಿಸಿ ಕಾರ್ಯದರ್ಶಿಗಳಾದ ರೋಜಿ ಜಾನ್, ಮಯೂರ್ ಜೈಕುಮಾರ್, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಮ್ ಅಹ್ಮದ್ ಮತ್ತಿತರರು ಭಾಗವಹಿಸಿದ್ದಾರೆ.

Home add -Advt

ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ಫ್ರೀಡಂ ಪಾರ್ಕ್ ನ ಪ್ರತಿಭಟನಾ ಸ್ಥಳಕ್ಕೆ ಕಡತಗಳನ್ನು ತಂದಿದ್ದಾರೆ. ಅಧಿಕಾರಿಗಳು ತಂದ ಕಡತಗಳನ್ನು ನೋಡಿ, ಡಿಸಿಎಂ ಡಿ.ಕೆ.ಶಿವಕುಮಾರ್ ಸಹಿ ಮಾಡಿ ಕಳುಹಿಸಿದ್ದಾರೆ.


Related Articles

Back to top button