
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅವರನ್ನು ಸಚಿವಸಂಪುಟದಿಂದ ವಜಾ ಮಾಡುವಂತೆ ಆಗ್ರಹಿಸಿದ ಕಾಂಗ್ರೆಸ್ ಪಕ್ಷ ಬುಧವಾರ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಲಿದೆ.
ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
ಬೆಳಗ್ಗೆ 10 ಗಂಟೆಗೆ ಕಾಂಗ್ರೆಸ್ ಕಚೇರಿಯಿಂದ ಮೆರವಣಿಗೆ ಹೊರಟು ಜಿಲ್ಲಾಧಿಕಾರಿ ಕಚೇರಿ ತಲುಪಿ ಪ್ರತಿಭಟನೆ ಸಭೆ ಹಾಗೂ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲು ನಿರ್ಧರಿಸಲಾಗಿದೆ. ಜಿಲ್ಲೆಯ ಎಲ್ಲ ಭಾಗಗಳಿಂದ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆಗಾಗಿ ಬೆಳಗಾವಿಗೆ ಆಗಮಿಸಲಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ