
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಪೆಟ್ರೋಲ್, ಡೀಸೆಲ್, ಗ್ಯಾಸ್ ದರ ಏರಿಕೆ ಖಂಡಿಸಿ ಕಾಂಗ್ರೆಸ್ ಇಂದಿನಿಂದ 5 ದಿನಗಳ ಕಾಲ ವಿವಿಧ ಜಿಲ್ಲೆಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದು, 5000 ಪೆಟ್ರೋಲ್ ಬಂಕ್ ಗಳ ಎದುರು ಧರಣಿ ನಡೆಸುತ್ತಿದೆ.
ಬೆಂಗಳೂರಿನಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ನಾಯಕರು ಪ್ರಧಾನಿ ಮೋದಿ ವಿರುದ್ಧ ದಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ವೇಳೆ ಮಾತನಾಡಿದ ಸಿದ್ದರಾಮಯ್ಯ, ಪ್ರಧಾನಿ ಮೋದಿ ದೇಶದ ಜನರಿಗೆ ನರಕ ಎಂದರೆ ಏನೆಂಬುದನ್ನು ತೋರಿಸುತ್ತಿದ್ದಾರೆ. ಪೆಟ್ರೋಲ್ , ಡಿಸೆಲ್ ದರ ಏರಿಕೆ ಮಾಡಲಾಗಿದೆ. ತೈಲ ಬೆಲೆ ಏರಿಕೆಯಾದರೆ ಅಗತ್ಯ ವಸ್ತುಗಳ ಬೆಲೆಯೂ ಏರುತ್ತೆ. ಯುಪಿಎ ಸರ್ಕಾರದ ಅವಧಿಯಲ್ಲಿ ಮೋದಿಯವರು ಪೆಟ್ರೋಲ್ ದರ ಏರಿಕೆ ಖಂಡಿಸಿ ಪ್ರತಿಭಟನೆ ನಡೆಸಿದ್ದರು. ಅಚ್ಚೇ ದಿನ್ ಭರವಸೆ ನೀಡಿ ಅಧಿಕಾರಕ್ಕೆ ಬಂದ ಮೋದಿ ಈಗ ಅವರೇ ತೈಲ ಬೆಲೆ ಏರಿಕೆ ಮಾಡಿ ಜನರ ರಕ್ತ ಹೀರುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ಪೆಟ್ರೋಲ್, ಡಿಸೆಲ್ ದರ, ಅಗತ್ಯವಸ್ತುಗಳ ಬೆಲೆ ಏರಿಕೆಯನ್ನು ಇಳಿಕೆ ಮಾಡಬೇಕು ಎಂದು ಆಗ್ರಹಿಸಿದರು.
ವ್ಹೀಲಿಂಗ್ ಹುಚ್ಚು; ಬಿಡುಗಡೆಯಾಗುತ್ತಿದ್ದಂತೆ ಜೈಲ್ ಆವರಣದಲ್ಲಿದ್ದ ಬೈಕನ್ನೇ ಕದ್ದ ಖದೀಮ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ