ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಬೆಳಗಾವಿ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷ ಬಲವರ್ದನೆ ಕುರಿತಂತೆ ಬೆಂಗಳೂರಿನಲ್ಲಿ ಭಾನುವಾರ ಮಹತ್ವದ ಸಭೆ ನಡೆಯಿತು.
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್. ಪಾಟೀಲ್ ಅವರು ಬೆಳಗಾವಿ ನಗರ, ಗ್ರಾಮಾಂತರ ಮತ್ತು ಚಿಕ್ಕೋಡಿ ಕಾಂಗ್ರೆಸ್ ಮುಖಂಡರ ಜತೆ ರಾಜಕೀಯ ವಿದ್ಯಮಾನ, ಪಕ್ಷ ಸಂಘಟನೆ ಬಲವರ್ಧನೆ, ಮುಂಬರುವ ಚುನಾವಣೆಗಳ ಸಂಬಂಧ ಭಾನುವಾರ ಸಮಾಲೋಚನೆ ನಡೆಸಿದರು.
ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಈಶ್ವರ ಖಂಡ್ರೆ, ಸಲೀಂ ಅಹಮದ್, ಸತೀಶ್ ಜಾರಕಿಹೊಳಿ, ವಿಧಾನಸಭೆಯಲ್ಲಿ ಪಕ್ಷದ ಮುಖ್ಯಸಚೇತಕ ಡಾ. ಅಜಯ್ ಸಿಂಗ್, ಶಾಸಕರಾದ ಲಕ್ಷ್ಮೀ ಹೆಬ್ಬಾಳ್ಕರ್, ಪಿ.ಎಂ. ಅಶೋಕ್, ಗಣೇಶ್ ಹುಕ್ಕೇರಿ, ಅಂಜಲಿ ನಿಂಬಾಳ್ಕರ್, ಡಿಸಿಸಿ ಅಧ್ಯಕ್ಷರಾದ ಆಸೀಫ್ ನೂರೂದ್ದೀನ್ ಸೇಠ್, ವಿನಯ್ ನವಲಗಟ್ಟಿ, ಲಕ್ಷ್ಮಣ್ ರಾವ್ ಚಿಂಗ್ಲೆ ಮತ್ತಿತರರು ಭಾಗವಹಿಸಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ