ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ: ಸಚಿವ ಎಚ್.ಕೆ.ಪಾಟೀಲ ಮಂಗಳವಾರ ಬೆಳಗಾವಿಗೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಸಮಿತಿಯ ಅಧ್ಯಕ್ಷರೂ ಆಗಿರುವ ಕಾನೂನು, ಸಂಸದೀಯ ವ್ಯವಹಾರಗಳು ಹಾಗೂ ಪ್ರವಾಸೋದ್ಯಮ ಇಲಾಖೆಯ ಸಚಿವರಾದ ಎಚ್.ಕೆ.ಪಾಟೀಲ ಅವರು ಮಂಗಳವಾರ(ನ.5) ಬೆಳಗಾವಿಗೆ ಭೇಟಿ ನೀಡಿ, ಶತಮಾನೋತ್ಸವ ಆಚರಣೆ ಕುರಿತು ಸಭೆಯನ್ನು ನಡೆಸಲಿದ್ದಾರೆ. ಬೆಳಗ್ಗೆ 10 ಗಂಟೆಗೆ ಬೆಳಗಾವಿಗೆ ಆಗಮಿಸಲಿರುವ ಎಚ್.ಕೆ. ಪಾಟೀಲ್, 1924 ರಲ್ಲಿ ಮಹಾತ್ಮಾ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ನಡೆದ ಐತಿಹಾಸಿಕ ಕಾಂಗ್ರೆಸ್ ಅಧಿವೇಶನಕ್ಕೆ ಸಾಕ್ಷಿಯಾದ ಸ್ಥಳಗಳಿಗೆ ಭೇಟಿ ನೀಡಲಿದ್ದಾರೆ.Home add … Continue reading ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ: ಸಚಿವ ಎಚ್.ಕೆ.ಪಾಟೀಲ ಮಂಗಳವಾರ ಬೆಳಗಾವಿಗೆ