
ಪ್ರಗತಿವಾಹಿನಿ ಸುದ್ದಿ, ಮೈಸೂರು: ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ರಾಜ್ಯದ ವಿವಿಧೆಡೆ ಭಾನುವಾರ ಅಬ್ಬರದ ಪ್ರಚಾರ ಕೈಗೊಂಡ ಬೆನ್ನಲ್ಲೇ ನಾಳೆ (ಏ.25) ಕಾಂಗ್ರೆಸ್ ನ ಸ್ಟಾರ್ ಪ್ರಚಾರಕಿ ಪ್ರಿಯಾಂಕಾ ಗಾಂಧಿ ಅವರು ಮೈಸೂರು ಜಿಲ್ಲೆಗೆ ಆಗಮಿಸಿ ಚುನಾವಣಾ ಪ್ರಚಾರ ಕೈಗೊಳ್ಳಲಿದ್ದಾರೆ.
ಮೈಸೂರು ಜಿಲ್ಲೆಯ ವಿವಿಧ ವಿಧಾನಸಭೆ ಕ್ಷೇತ್ರಗಳಲ್ಲಿ ನಡೆಯುವ ಸಾರ್ವಜನಿಕ ಸಭೆಗಳಲ್ಲಿ ಭಾಗವಹಿಸಲಿರುವ ಪ್ರಯಾಂಕಾ ಏ. ಮಧ್ಯಾಹ್ನ 12 ರಿಂದ 1 ಗಂಟೆಗೆ ಟಿ.ನರಸೀಪುರ ಕ್ಷೇತ್ರದ ಹೆಳವರಹುಂಡಿಯಲ್ಲಿ ಸಾರ್ವಜನಿಕರ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ 2.30ಕ್ಕೆ ಹನೂರು ಕ್ಷೇತ್ರಕ್ಕೆ ತೆರಳಿ, ಗೌರಿಶಂಕರ್ ಕನ್ವೆನ್ಷನ್ ಹಾಲ್ನಲ್ಲಿ ಮಧ್ಯಾಹ್ನ 3 ರಿಂದ 4 ಗಂಟೆಯವರೆಗೆ ಮಹಿಳೆಯರ ಜೊತೆ ಸಂವಾದ ನಡೆಸಲಿದ್ದಾರೆ.