Election NewsKannada NewsKarnataka NewsPolitics

*ಉಪಚುನಾವಣೆ: ನಾಳೆ ಬೆಳಗ್ಗೆ ಕಾಂಗ್ರೆಸ್ ಟಿಕೆಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ : ಎಲ್ಲಾ ಗೊಂದಲ ಬಗೆಹರಿದಿವೆ. ನಾಳೆ ಬೆಳಗ್ಗೆ ಒಳಗೆ ಕಾಂಗ್ರೆಸ್ ಟಿಕೆಟ್ ಘೋಷಣೆ ಆಗುತ್ತೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಹೇಳಿದರು.

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ ಕಗ್ಗಂಟು ಮುಂದುವರಿದಿದೆ. ಇದರ ಮಧ್ಯೆ ಕಾಂಗ್ರೆಸ್ಸನ್ನು ಶಾಮನೂರು ಫ್ಯಾಮಿಲಿ ಪಾಲಿಟಿಕ್ಸ್ ಇಕ್ಕಟ್ಟಿಗೆ ಸಿಲುಕಿಸಿದೆ. ಸಮರ್ಥ್ ಶಾಮನೂರು ಟಿಕೆಟ್ ಘೋಷಣೆಗೂ ಮುನ್ನವೇ ನಾಮಪತ್ರ ಸಲ್ಲಿಸಿ, ಚಮಕ್ ಕೊಟ್ಟಿದ್ದಾರೆ. ಆದ್ರೆ, ಎಲ್ಲಾ ಗೊಂದಲ ಬಗೆಹರಿದಿವೆ. ನಾಳೆ ಬೆಳಗ್ಗೆ ಒಳಗೆ ಕಾಂಗ್ರೆಸ್ ಟಿಕೆಟ್ ಘೋಷಣೆ ಆಗುತ್ತೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಹೇಳಿದ್ದಾರೆ.

ಬೈ ಎಲೆಕ್ಷನ್ ಟಿಕೆಟ್ ಫೈಟ್ ಸುಖಾಂತ್ಯಕ್ಕೆ ಉಸ್ತುವಾರಿ ಸುರ್ಜೇವಾಲಾ ಕಸರತ್ತು ನಡೆಸ್ತಿದ್ದಾರೆ. ಇಂದು ಸಂಜೆ ಅಥವಾ ನಾಳೆ ಅಭ್ಯರ್ಥಿಗಳು ಫೈನಲ್ ಆಗುವ ಸಾಧ್ಯತೆ ಇದೆ. ಪ್ರತಿ ಕಾರ್ಯಕರ್ತನ ಅಪಸ್ವರವನ್ನೂ ಕೇಳಿದ್ದೇವೆ. ಟಿಕೆಟ್ ಅಂತಿಮಕ್ಕೆ ಸುದೀರ್ಘ ಚರ್ಚೆ ನಡೆಸಿದ್ದೇವೆ ಎಂಎಂದಿದ್ದಾರೆ.

ದಾವಣಗೆರೆ ದಕ್ಷಿಣ ಕ್ಷೇತ್ರದ ಟಿಕೆಟ್‌ಗೆ ಭಾರೀ ಲಾಬಿ ನಡೆಯುತ್ತಿದೆ. ಮುಸ್ಲಿಂ ಹಾಗೂ ಲಿಂಗಾಯತ ನಾಯಕರ ನಡುವೆ ವಾಕ್ಸಮರ ಜೋರಾಗಿದೆ. ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆಗೆ ಅಸಮಾಧಾನ ಸ್ಫೋಟ ಆಗಿದೆ. ನಿನ್ನೆ ಸುರ್ಜೇವಾಲಾ ಸಭೆಯಲ್ಲಿ ಮುಸ್ಲಿಂ ಸಮುದಾಯದ ಸಚಿವರು, ಶಾಸಕರು ಕಿಡಿಕಾರಿದ್ದಾರೆ.

ಟಿಕೆಟ್ ಕೇಳುವುದು ಎಲ್ಲರಿಗೂ ಹಕ್ಕಿದೆ ಅಂತಾ ವಿಜಯಪುರದಲ್ಲಿ ಸಚಿವ ಎಂ. ಬಿ ಪಾಟೀಲ್ ಹೇಳಿದ್ದಾರೆ. ಪ್ರತಿ ಧರ್ಮ, ಪ್ರತಿ ಜಾತಿಯವರಿಗೂ ಟಿಕೆಟ್ ಕೇಳುವ ಹಕ್ಕಿದೆ. ಆದರೆ ಅಂತಿಮವಾಗಿ ಹೈಕಮಾಂಡ್ ತೀರ್ಮಾನ ಮಾಡುತ್ತೆ ಅಂತಾ ಪ್ರತಿಕ್ರಿಯಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button