ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಿಂದ ಅರ್ಜಿ ಸಲ್ಲಿಕೆಗೆ ನಿಗದಿ ಮಾಡಲಾಗಿದ್ದ ಗಡುವನ್ನು ನವೆಂಬರ್ 21 ರವರೆಗೆ ವಿಸ್ತರಿಸಲಾಗಿದೆ.
ಈ ಮೊದಲು ಅರ್ಜಿ ಸಲ್ಲಿಕೆಗೆ ನವೆಂಬರ್ 15 ಇಂದು ಕೊನೇ ದಿನವಾಗಿತ್ತು. ಆದರೆ ಈ ಅವಧಿ ವಿಸ್ತರಣೆ ಮಾಡುವಂತೆ ರಾಜ್ಯದ ಮೂಲೆ, ಮೂಲೆಗಳಿಂದ ಪಕ್ಷದವರು ಹಾಗೂ ಅನ್ಯ ಪಕ್ಷಗಳಿಂದ ಕಾಂಗ್ರೆಸ್ ಗೆ ಬರಲು ಇಚ್ಚಿಸಿರುವ ಟಿಕೆಟ್ ಆಕಾಂಕ್ಷಿಗಳಿಂದ ಒತ್ತಡ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಿಸಲಾಗಿದೆ.
ನವೆಂಬರ್ 21ರವರೆಗೆ ಕಾಂಗ್ರೆಸ್ ಟಿಕೆಟ್ ಗೆ ಅರ್ಜಿ ಸಲ್ಲಿಸಬಹುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ.
KPTCL ಪರೀಕ್ಷಾ ಅಕ್ರಮ; ಮತ್ತೆ ನಾಲ್ವರ
https://pragati.taskdun.com/kptcl-exam-scam4-arrestedbelagavi/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ