Kannada NewsKarnataka NewsLatest
ಕನಿಷ್ಟ 1 ಲಕ್ಷ ಮತಗಳಿಂದ ಕಾಂಗ್ರೆಸ್ ಗೆಲುವು – ಲಕ್ಷ್ಮಿ ಹೆಬ್ಬಾಳಕರ್ ವಿಶ್ವಾಸ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಶನಿವಾರ ನಡೆದ ಬೆಳಗಾವಿ ಲೋಕಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಕನಿಷ್ಠ 80 ಸಾವಿರದಿಂದ 1 ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ ಎಂದು ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ನಾನು ಭವಿಷ್ಯ ಹೆಳುವುದಿಲ್ಲ. ಆದರೆ ಕ್ಷೇತ್ರದ ಎಲ್ಲ ಕಡೆಯಿಂದ ಮಾಹಿತಿ ಪಡೆದು ಹೇಳುತ್ತಿದ್ದೇನೆ. ಸತೀಶ್ ಜಾರಕಿಹೊಳಿ ಗೆಲ್ಲುವುದರಲ್ಲಿ ಯಾವುದೆ ಸಂಶಯವಿಲ್ಲ. ಒಂದು ಲಕ್ಷದಷ್ಟು ಗೆಲುವಿನ ಅಂತರ ಕಾಯ್ದುಕೊಳ್ಳಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಮತದಾನ ಮಾಡಿದ ಎಲ್ಲರಿಗೂ ಅವರು ಧನ್ಯವಾದ ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ