Belagavi NewsBelgaum NewsElection NewsPolitics

*ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಖಚಿತ: ಸಿದ್ದರಾಮಯ್ಯ ವಿಶ್ವಾಸ*

ಪ್ರಗತಿವಾಹಿನಿ ಸುದ್ದಿ: ನವೆಂಬರ್ 13 ರಂದು ನಡೆಯಲಿರುವ ಮೂರು ಕ್ಷೇತ್ರಗಳ ಉಪ ಚುನಾವಣೆಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಶ್ವಾಸ ವ್ಯಕ್ತಪಡಿಸಿದರು.

ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಪಚುನಾವಣೆಗೆ ಮುಂಚಿತವಾಗಿ ಸಿದ್ಧತೆಗಳನ್ನು ಪ್ರಾರಂಭಿಸಲಾಗಿತ್ತು. ಗೆಲುವನ್ನು ಖಚಿತಪಡಿಸಿಕೊಳ್ಳಲು ಸಮರ್ಥ ಅಭ್ಯರ್ಥಿಗಳನ್ನು ಕೂಡ ಘೋಷಣೆ ಮಾಡಲಾಗಿದೆ. ಹೀಗಾಗಿ ಈ ಬಾರಿ ಮೂರು ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಗೆಲುವು ಖಚಿತ ಎಂದು ಹೇಳಿದರು.

Home add -Advt

ಶಿಗ್ಗಾಂವಿ ಕ್ಷೇತ್ರಕ್ಕೆ ಪಕ್ಷದ ಅಭ್ಯರ್ಥಿ ಯಾಸೀರ್ ಅಹಮದ್ ಖಾನ್ ಪಠಾಣ್ ಹಾಗೂ ಅಜೀಂಪೀರ್ ಖಾದ್ರಿ ನಡುವೆ ಪೈಪೋಟಿ ಇತ್ತು, ಪಠಾಣ್ ಅವರು ಹಿಂದಿನ ಚುನಾವಣೆಯಲ್ಲಿ ಸ್ಪರ್ಧಿಸಿ ಸೋತಿದ್ದು, ಪಕ್ಷ ಅವರಿಗೆ ಮತ್ತೊಮ್ಮೆ ಅವಕಾಶ ನೀಡಬೇಕೆಂದು ಬಯಸಿದೆ. ಖಾದ್ರಿ ಅವರು ಇದೇ ಕ್ಷೇತ್ರದ ಸಮರ್ಥ ನಾಯಕರಾಗಿದ್ದು, ಬಂಡಾಯವಾಗಿ ಸ್ಪರ್ಧಿಸದಂತೆ ಅವರಿಗೆ ಮನವರಿಕೆ ಮಾಡಿಕೊಡಲಾಗುವುದು ಎಂದರು.

Related Articles

Back to top button