ಪ್ರಗತಿವಾಹಿನಿ ಸುದ್ದಿ, ಬೆಳಗಾವಿ –
ಸಚಿವ ಕೆ ಎಸ್ ಈಶ್ವರಪ್ಪ ಅವರ ಕಮಿಷನ್ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವ ಗುತ್ತಿಗೆದಾರ ಸಂತೋಷ್ ಕೆ ಪಾಟೀಲ್ ಅವರ ಬೆಳಗಾವಿ ಹಿಂಡಲಗಾ ನಿವಾಸಕ್ಕೆ ಕಾಂಗ್ರೆಸ್ ಮುಖಂಡರು ಭೇಟಿ ನೀಡಿ ಸಾಂತ್ವನ ಹೇಳಿದರು.
ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲಾ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್, ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್, ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತಿತರರು ಬುಧವಾರ ಸಂಜೆ ಭೇಟಿ ಕೊಟ್ಟು, ಕುಟುಂಬ ಸದಸ್ಯರಿಗೆ ಸಾಂತ್ವನ, ಧೈರ್ಯ ಹೇಳಿದರು.
ಬಾಕಿ ಇರುವ ಬಿಲ್ ಕೊಡಿಸಲು ಎಲ್ಲ ಪ್ರಯತ್ನ ಮಾಡಲಾಗುವುದು. ಎಲ್ಲ ದೃಷ್ಟಿಯಿಂದ ಕಾಂಗ್ರೆಸ್ ಪಕ್ಷ ನಿಮ್ಮ ಜೊತೆಗಿರಲಿದೆ. ಧೈರ್ಯ ಕಳೆದುಕೊಳ್ಳುವುದು ಬೇಡ ಎಂದು ಭರವಸೆ ನೀಡಿದರು.
ಒಂದು ವರ್ಷದ ಮಗ, ಫೋಟೋ ತೋರಿಸಿ ಅಪ್ಪ ಎಲ್ಲಿದ್ದಾನೆ ಎಂದು ಕೇಳುತ್ತಿದ್ದಾನೆ. ಏನು ಉತ್ತರ ಕೊಡಲಿ ಎಂದು ಸಂತೋಷ ಪತ್ನಿ ಜಯಶ್ರೀ ಕಣ್ಣೀರು ಹಾಕಿದರು.
ಹಿಂಡಲಗಾ ಗ್ರಾಮ ಪಂಚಾಯಿತಿ ಅಧ್ಯಕ್ಷ ನಾಗೇಶ ಮನ್ನೋಳಕರ್ ಅವರೇ ಈಶ್ವರಪ್ಪ ಬಳಿ ಸಂತೋಷ ಅವರನ್ನು ಕರೆದುಕೊಂಡು ಹೋಗಿ ಕೆಲಸ ಮಾಡಿಸುವಂತೆ ಹೇಳಿಸಿದ್ದರು ಎಂದು ಜಯಶ್ರೀ ಹೇಳಿದರು.
ಕಾಂಗ್ರೆಸ್ ವತಿಯಿಂದ ಆರ್ಥಿಕ ನೆರವನ್ನೂ ನೀಡಲಾಯಿತು.
ರಾಜಿನಾಮೆ ಕೊಡುವ ಪ್ರಶ್ನೆಯೇ ಇಲ್ಲ, ಅದು ಡೆತ್ ನೋಟ್ ಅಲ್ಲ, ಕೇವಲ ಮೆಸೇಜ್ – ಈಶ್ವರಪ್ಪ ಹೇಳಿಕೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ