*ನಾಳೆ ರಾಜ್ಯಾದ್ಯಂತ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಕಾಂಗ್ರೆಸ್ ಪ್ರತಿಭಟಿಸಲಿದೆ: ಡಿಕೆಶಿ*

ಪ್ರಗತಿವಾಹಿನಿ ಸುದ್ದಿ: ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವ ಮೂಲಕ ಪ್ರಜಾಪ್ರಭುತ್ವದ ಕಗ್ಗೋಲೆಗೆ ಮುಂದಾಗಿದ್ದಾರೆ. ಇದನ್ನು ಖಂಡಿಸಿ ನಾಳೆ ರಾಜ್ಯಾದ್ಯಂತ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಶಾಂತಿಯುತವಾಗಿ ಪ್ರತಿಭಟನೆ ನಡೆಸಲಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ರಾಜ್ಯಪಾಲರ ನಡೆಯನ್ನು ಖಂಡಿಸಿ ಪಕ್ಷವು ರಾಷ್ಟ್ರಪತಿಗಳಿಗೆ ಮನವಿಯನ್ನು ಸಲ್ಲಿಸಲಿದೆ. ಯಾವುದೇ ದಾಂಧಲೆ ಇಲ್ಲದೆ ಶಾಂತಿಯುತವಾಗಿ ಎಚ್ಚರಿಕೆಯಿಂದ ಪ್ರತಿಭಟನೆ ನಡೆಸಲಾಗುವುದು. ಗಾಂಧಿ ಪ್ರತಿಪಾದಿಸಿದ ಶಾಂತಿ ಮಾರ್ಗದಲ್ಲಿ ಪ್ರತಿಭಟನೆ ನಡೆಸಿ ದೇಶಕ್ಕೆ ಸಂದೇಶ ನೀಡುವುದಾಗಿ ಡಿಕೆಶಿ ಹೇಳಿದ್ದಾರೆ.Home add -Advt … Continue reading *ನಾಳೆ ರಾಜ್ಯಾದ್ಯಂತ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಕಾಂಗ್ರೆಸ್ ಪ್ರತಿಭಟಿಸಲಿದೆ: ಡಿಕೆಶಿ*