Kannada NewsKarnataka NewsLatest
ಬೆಳಗಾವಿ ಲೋಕಸಭಾ ಕ್ಷೇತ್ರ ಮರಳಿ ಕಾಂಗ್ರೆಸ್ ತೆಕ್ಕೆಗೆ – ಲಕ್ಷ್ಮಿ ಹೆಬ್ಬಾಳಕರ್ ವಿಶ್ವಾಸ

ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಜೊತೆ ವಿವಿಧೆಡೆ ಪ್ರಚಾರ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಬೆಳಗಾವಿ ಲೋಕಸಭಾ ಕ್ಷೇತ್ರ ಮರಳಿ ಕಾಂಗ್ರೆಸ್ ತೆಕ್ಕೆಗೆ ಬರುವುದು ಖಚಿತ ಎಂದು ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಬೆಳಗ್ಗೆ ಸಾಂಬ್ರಾ ಗ್ರಾಮಕ್ಕೆ ತೆರಳಿ ಸಂವಿಧಾನ ಶಿಲ್ಪಿ, ಸಮಾನತೆಯ ಹರಿಕಾರ ಹಾಗೂ ಮಹಾನ್ ನಾಯಕರಾದ ಡಾ. ಬಿ. ಆರ್ ಅಂಬೇಡ್ಕರ್ ಜಯಂತಿಯ ನಿಮಿತ್ಯ ಅವರ ಪುತ್ಥಳಿಗೆ ಗೌರವಾರ್ಪಣೆಯನ್ನು ಸಲ್ಲಿಸಿ ನಂತರ ಇಬ್ಬರು ನಾಯಕರೂ ವಿವಿಧೆಡೆ ಪ್ರಚಾರ ಕಾರ್ಯ ಆರಂಭಿಸಿದರು.

ಶ್ರೀ ಬೀರದೇವರ ಮಂದಿರಕ್ಕೆ ತೆರಳಿ ಆಶೀರ್ವಾದವನ್ನು ಪಡೆದು, ಬೆಳಗಾವಿ ಜಿಲ್ಲೆಯ ಅಭಿವೃದ್ಧಿಗಾಗಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವ ಮೂಲಕ ಕೈ ಜೋಡಿಸಿ ಎಂದು ಅಲ್ಲಿ ಸೇರಿದ್ದ ಜನರಿಗೆ ಲಕ್ಷ್ಮಿ ಹೆಬ್ಬಾಳಕರ್ ಮನವಿ ಮಾಡಿದರು.



ಅಭೂತಪೂರ್ವ ಜನ ಬೆಂಬಲ ದೊರೆಯುತ್ತಿರುವುದನ್ನು ನೋಡಿದರೆ ಸತೀಶಣ್ಣನವರು ಲಕ್ಷಾಂತರ ಮತಗಳ ಅಂತರದಿಂದ ಗೆಲ್ಲುವುದರಲ್ಲಿ ಯಾವ ಸಂಶಯವೂ ಇಲ್ಲ ಎಂದು ಹೆಬ್ಬಾ ಳಕರ್ ತಿಳಿಸಿದರು.
ಪಂತ ಬಾಳೇಕುಂದ್ರಿ ಗ್ರಾಮದಲ್ಲಿ ಮತ್ತು ಕೆಕೆ ಕೊಪ್ಪ ಗ್ರಾಮದಲ್ಲಿ ಸಹ ಲೋಕಸಭಾ ಉಪ ಚುಣಾವಣೆಯ ಅಂಗವಾಗಿ ಸತೀಶ್ ಜಾರಕಿಹೊಳಿ ಜೊತೆ ಲಕ್ಷ್ಮಿ ಹೆಬ್ಬಾಳಕರ್ ಪ್ರಚಾರ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮತ ಯಾಚಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ