

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಿಣೆ ಗ್ರಾಮ ಪಂಚಾಯತಿ ಅಧ್ಯಕ್ಷ – ಉಪಾಧ್ಯಕ್ಷ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ವಿಜಯ ಪತಾಕೆ ಹಾರಿಸಿದೆ.
ಮಹಾರಾಷ್ಟ್ರ ಏಕೀಕರಣ ಸಮಿತಿಯನ್ನು ಪರಾಭವಗೊಳಿಸಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದೆ.
ಅಧ್ಯಕ್ಷರಾಗಿ ಅರ್ಚನಾ ಚಿಗರೆ ಹಾಗೂ ಉಪಾಧ್ಯಕ್ಷರಾಗಿ ಭರಮಣ್ಣ ಪಾಟೀಲ ಆಯ್ಕೆಯಾಗಿದ್ದಾರೆ.
22 ಸದಸ್ಯರ ಗ್ರಾಮ ಪಂಚಾಯಿತಿಯಲ್ಲಿ ಅರ್ಚನಾ ಚಿಗರೆ14 ಮತ ಮತ್ತು ಭರಮಣ್ಮ ಪಾಟೀಲ 13 ಮತಗಳನ್ನು ಪಡೆದರು.
ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿ ಅಭಿವೃದ್ಧಿಗೆ ಕೈಜೋಡಿಸಿದ್ದಕ್ಕಾಗಿ ಎಲ್ಲ ಸದಸ್ಯರಿಗೆ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಧನ್ಯವಾದಗಳನ್ನು ಸಲ್ಲಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ