ಪ್ರಗತಿವಾಹಿನಿ ಸುದ್ದಿ; ಲಕ್ನೌ: ಅತ್ಯಾಚಾರ ಆರೋಪಿಗೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ನೀಡಿದ್ದನ್ನು ಪ್ರಶ್ನಿಸಿದ್ದಕ್ಕೆ ಮಹಿಳಾ ಕಾರ್ಯಕರ್ತೆಯ ಮೇಲೆ ಸ್ವಪಕ್ಷೀಯರೇ ಹಲ್ಲೆ ನಡೆಸಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.
ಉತ್ತರ ಪ್ರದೇಶದ ಡಿಯೇರಿಯಾ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆಗೆ ಕಾಂಗ್ರೆಸ್ ನಿಂದ ಮುಕುಂದ್ ಭಾಸ್ಕರ್ ಎಂಬಾತನಿಗೆ ಟಿಕೆಟ್ ನೀಡಲಾಗಿದ್ದು, ಇವರ ವಿರುದ್ಧ ಅತ್ಯಾಚಾರ ಆರೋಪ ಕೇಳಿಬಂದಿದೆ. ಇದನ್ನು ಕಾಂಗ್ರೆಸ್ ಕಾರ್ಯಕರ್ತೆ ತಾರಾ ದೇವಿ ಪಕ್ಷದ ಆಂತರಿಕ ಸಭೆಯಲ್ಲಿ ಪ್ರಶ್ನಿಸಿದ್ದಾರೆ. ಅತ್ಯಾಚಾರ ಆರೋಪಿಗೆ ಟಿಕೆಟ್ ನೀಡಿರುವುದರಿಂದ ಪಕ್ಷದ ಇಮೇಜ್ ಗೆ ಧಕ್ಕೆಯಾಗಲಿದೆ ಎಂದಿದ್ದಾರೆ.
ಇದಕ್ಕೆ ಸಭೆಯಲ್ಲಿಯೇ ಕಾಂಗ್ರೆಸ್ ಸದಸ್ಯರು ತಾರಾ ದೇವಿ ಸಿಂಗ್ ಅವರನ್ನು ಥಳಿಸಿದ್ದು, ಈ ಕುರಿತ ವಿಡಿಯೋ ವೈರಲ್ ಆಗಿದೆ. ಮಹಿಳಾ ಕಾರ್ಯಕರ್ತೆಯ ಮೇಲೆ ಹಲ್ಲೆಗೆ ದೇಶಾದ್ಯಂತ ಪಕ್ಷಾತೀತವಾಗಿ ಖಂಡನೆ ವ್ಯಕ್ತವಾಗಿದೆ.
ಇನ್ನು ತಮ್ಮ ಮೇಲೆ ಹಲ್ಲೆ ನಡೆಸಿರುವ ಕುರಿತು ತಾರಾ ದೇವಿ ಸಿಂಗ್ ಅವರು, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಧರ್ಮೆಂದ್ರ ಸಿಂಗ್, ಉಪಾಧ್ಯಕ್ಷ ಅಜಯ್ ಸಿಂಗ್ ಸೇರಿದಂತೆ ಹಲವರ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ. ಅಲ್ಲದೇ ತಮ್ಮನ್ನು ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾರೆ ಎಂದು ಕೂಡ ದೂರು ದಾಖಲಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ